ಮುಂಬೈ: ಹಿಂದಿ ಭಾಷೆಯ ಜನಪ್ರಿಯ ಬಿಗ್ ಬಾಸ್ ರಿಯಾಲಿಟಿ ಶೋಗೆ ಬಳಸಲಾದ ಗೋರೆಗಾವ್ ನಲ್ಲಿರುವ ಮನೆಯಲ್ಲಿನ ಅಗ್ನಿ ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನಿಸಿ ವಕೀಲರೊಬ್ಬರು ಮಾಹಿತಿ ಹಕ್ಕು ಅಧಿನಿಯಮದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಮನೆಯ ಬಳಕೆಗೆ ಮುನ್ನ ಅಗ್ನಿಶಾಮಕ ದಳದಿಂದ ನಿರಾಕ್ಷೇಪಣಾ ಪತ್ರವನ್ನು ಪಡೆಯಲಾಗಿದೆಯೆ ಎಂದು ಅರ್ಜಿಯಲ್ಲಿ ಅವರು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಅಗ್ನಿಶಾಮಕ ದಳ ಈ ಕುರಿತು ಯಾವುದೇ ಮಾಹಿತಿಯಿಲ್ಲ ಎಂದು ಉತ್ತರಿಸಿದೆ.