ಸಾಂದರ್ಭಿಕ ಚಿತ್ರ 
ರಾಜ್ಯ

ತಮಿಳುನಾಡು ಬಸ್‌ ಡಿಕ್ಕಿ: ಬೈಕ್ ಸವಾರ ದುರ್ಮರಣ 

ಬೈಕ್‌ಗೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್‌ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಅರ್ಚಕ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಬೆಂಗಳೂರು: ಬೈಕ್‌ಗೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್‌ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಅರ್ಚಕ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗೌರಿಬಿದನೂರಿನ ನಿವಾಸಿ ಶ್ರೀನಿವಾಸ್ ಶ್ರೀನಾಥ್ (41) ಮೃತಪಟ್ಟವರು. ಅವರ ಸಹೋದರ ಹರೀಶ್ ಗಂಭೀರ ಗಾಯಗೊಂಡಿದ್ದು, ಆದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಿಗಣಿಯಲ್ಲಿ ಕಾರ್ಖಾನೆಯೊಂದಕ್ಕೆ ಭೂಮಿ ಪೂಜೆ ನೆರವೇರಿಸಲು ಅರ್ಚಕರಾಗಿದ್ದ ಶ್ರೀನಿವಾಸ್ ಶ್ರೀನಾಥ್ ಅವರು ತಮ್ಮ ಸಹೋದರ ಹರೀಶ್‌ ಅವರನ್ನು ಕರೆದುಕೊಂಡು ಶನಿವಾರ ರಾತ್ರಿ ಗೌರಿಬಿದನೂರಿನಿಂದ ಎಲೆಕ್ಟ್ರಾನಿಕ್ ಸಿಟಿಗೆ ಬಂದು ಬೌನ್ಸ್ ಸ್ಕೂಟರ್‌ ಬಾಡಿಗೆ ಪಡೆದು ಹೋಗುತ್ತಿದ್ದಾಗ ಹೊಸೂರು ಮುಖ್ಯರಸ್ತೆಯ ಎಲೆಕ್ಟ್ರಾನಿಕ್ ಸಿಟಿ ವೀರಸಂದ್ರ  ಸಿಗ್ನಲ್ ಬಳಿ ಬಸ್‌ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಬೌನ್ಸ್ ಸ್ಕೂಟರ್‌ನ್ನು ಹರೀಶ್ ಚಲಾಯಿಸುತ್ತಿದ್ದರೆ, ಹಿಂದೆ ಶ್ರೀನಿವಾಸ್ ಶ್ರೀನಾಥ್ ಕುಳಿತಿದ್ದರು. ಜಿಗಣಿ ಕಡೆ ಹೋಗುವಾಗ ಮಾರ್ಗ ಮಧ್ಯೆ ವೀರಸಂದ್ರ ಸಿಗ್ನಲ್ ಬಳಿ ಹಿಂದಿನಿಂದ ವೇಗವಾಗಿ ಬಂದ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಲ ತೊಡೆ, ಸೊಂಟಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್ ಶ್ರೀನಾಥ್ ಅವರನ್ನು ಕೂಡಲೇ ಚಂದಾಪುರದ ಬೆಸ್ಟ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಹರೀಶ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಅಪಘಾತ ನಡೆಸಿದ ಬಸ್‌ನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಲಾಗಿದೆ ಎಂದು ಎಲೆಕ್ಟ್ರಾನಿಕ್ ಸಿಟಿ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ