ಸಿದ್ದರಾಮಯ್ಯ 
ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತೀಚಿಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಈ ಕಾರಣಕ್ಕೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಉಪಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತಿದ್ದಕ್ಕೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ತಮ್ಮ ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT