ಸಂಗ್ರಹ ಚಿತ್ರ 
ರಾಜ್ಯ

ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ದಾಳಿ: ಇಬ್ಬರು ವಶ

ನಕಲಿ ಅಂಕ ಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ಬೆಂಗಳೂರು: ನಕಲಿ ಅಂಕ ಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ನಗರದ ಮಹಾಲಕ್ಷ್ಮಿಲೇಔಟ್ ನಲ್ಲಿರುವ ವೆಂಕಟೇಶ್ವರ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಸಂಸ್ಥೆಯು ಆಂಧ್ರ ಪ್ರದೇಶ ಮೂಲದ ಶ್ರೀನಿವಾಸ ರೆಡ್ಡಿ ಎಂಬುವವರಿಗೆ ಸೇರಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆಯಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ಹಾಗೂ ಪದವಿ ಮಟ್ಟದ ಅಪಾರ ಪ್ರಮಾಣದ ನಕಲಿ ಅಂಕಪಟ್ಟಿ ಪತ್ತೆಯಾಗಿದೆ. 

ಈ ಸಂಸ್ಥೆಯಲ್ಲಿ ಹಲವು ವಿಶ್ವವಿದ್ಯಾಲಯಗಳ ನಕಲಿ ಅಂಕ ಪಟ್ಟಿಗಳನ್ನು ನೀಡಲಾಗುತ್ತಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ನಕಲಿ ಅಂಕಪಟ್ಟಿ ನೀಡಲು 3 ಲಕ್ಷ ರೂ ವರೆಗೆ ಹಣ ಪಡೆಯಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯಲ್ಲಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ