ರಾಜ್ಯ

ಬೆಂಗಳೂರು: ಆಂಜಿಯೋ ಪ್ಲಾಸ್ಟಿ ಚಿಕಿತ್ಸೆಗೆ ಒಳಗಾದ ಸಿದ್ದರಾಮಯ್ಯ

Lingaraj Badiger

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ.

ಇಂದು ಬೆಳಗ್ಗೆ 6:30ರ ಸುಮಾರಿಗೆ ಸಿದ್ದರಾಮಯ್ಯ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಅವರು ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆ ಪಡೆದರು.

ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದು, ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಅವರ ಕಚೇರ ಮೂಲಗಳು ತಿಳಿಸಿವೆ.

ಇತ್ತೀಚಿಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಹೀಗಾಗಿ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವ ವಹಿಸಿದ್ದ ಸಿದ್ದರಾಮಯ್ಯ, 15 ಕ್ಷೇತ್ರಗಳಲ್ಲಿ 2 ಕ್ಷೇತ್ರದಲ್ಲಿ ಮಾತ್ರ ಪಕ್ಷವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಸೋಲಿನ ನೈತಿಕ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

SCROLL FOR NEXT