ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಮಸಾಜ್ ಪಾರ್ಲರ್‌ನಲ್ಲಿ ವೇಶ್ಯಾವಾಟಿಕೆ, ಓರ್ವನ ಬಂಧನ

ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

33 ವರ್ಷದ ಮಾಂತೇಶ್ ಮತ್ತಿಕೊದ್ದ ಬಂಧಿತ ಆರೋಪಿ. ಈತನಿಂದ 89,700 ನಗದು, 4 ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ನಗರದ ಬನಶಂಕರಿ ಯಲ್ಲಿ ಅಸೈರ್ ಥಾಯಿ ಸ್ಪಾ ಸಲೂನ್ ನಲ್ಲಿ ನಾರಾಯಣ ಸ್ವಾಮಿ ಎಂಬಾತ ಅಕ್ರಮವಾಗಿ ಹುಡುಗಿಯರನ್ನು ಇಟ್ಟುಕೊಂಡು ವೇಶ್ಯವಾಟಿಕೆ ನಡೆಸುತ್ತಿದ್ದ. ಈತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?