ರಾಜ್ಯ

ಮಂಡ್ಯ: ಆದಿಚುಂಚನಗಿರಿ ಮಠಕ್ಕೆ ಯಡಿಯೂರಪ್ಪ ಭೇಟಿ, ಸಿಎಂ ಕಾಲಿಗೆ ಬಿದ್ದ ಜೆಡಿಎಸ್ ಶಾಸಕ

Lingaraj Badiger

ಮಂಡ್ಯ: ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.

ಆದಿಚುಂಚನಗಿರಿಯಲ್ಲಿನ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿಯವರು ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮಠದ ಶ್ರೀ ನಿರ್ಮಲಾನಂದ ಸ್ವಾಮಿ ಅವರು ಮುಖ್ಯಮಂತ್ರಿಯವರಿಗೆ ಭವ್ಯ ಸ್ವಾಗತ ಕೋರಿದರು. 

ಕುತೂಹಲ ಸಂಗತಿ ಎಂದರೆ, ನಾಗಮಂಗಲದ ಜೆಡಿಎಸ್ ಶಾಸಕ ಸುರೇಶ್ ಗೌಡ ಮುಖ್ಯಮಂತ್ರಿ ಪಾದ ಮುಟ್ಟಿ ಆಶೀರ್ವಾದ ಕೋರಿದರು. ಮುಖ್ಯಮಂತ್ರಿಯವರೊಂದಿಗೆ ಸಚಿವರಾದ ಆರ್.ಅಶೋಕ್ ಮತ್ತು ಕೆ.ಆರ್.ಪೇಟೆಯಿಂದ ಉಪಚುನಾವಣೆಯಲ್ಲಿ ಪುನರಾಯ್ಕೆಯಾಗಿರುವ ಶಾಸಕ ನಾರಾಯಣಗೌಡ ಇದ್ದರು.

ಬಳಿಕ ಜೆಡಿಎಸ್‍ನ ಭದ್ರಕೋಟೆ ಎನಿಸಿದ್ದ ಕೆ.ಆರ್.ಪೇಟೆಯಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ತೆರಳಿದರು. ಆ ನಂತರ ಅವರು ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

SCROLL FOR NEXT