ಹುಬ್ಬಳ್ಳಿಯಲ್ಲಿ ದಲೈಲಾಮಾಗೆ ಧಾರವಾಡ ಜಿಲ್ಲಾಧಿಕಾರಿಗಳಿಂದ ಸ್ವಾಗತ 
ರಾಜ್ಯ

ವಾಣಿಜ್ಯನಗರಿ ಹುಬ್ಬಳ್ಳಿಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ ಆಗಮನ

ಟಿಬೆಟಿಯನ್ ಧರ್ಮಗುರು ದಲೈಲಾಮಾ ಕರ್ನಾಟಕದ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. 

ಹುಬ್ಬಳ್ಳಿ: ಟಿಬೆಟಿಯನ್ ಧರ್ಮಗುರು ದಲೈಲಾಮಾ ಕರ್ನಾಟಕದ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. 

ಗೋವಾದಿಂದ ಖಾಸಗಿ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ದಲೈಲಾಮಾ ಅವರನ್ನು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ. ಈ ಸಮಯ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಉಪವಿಭಾಗಾಧಿಕಾರಿ ಮಹಮದ್ ಜುಬೇರ್, ಡಿಸಿಪಿ ನಾಗೇಶ್.ಡಿ.ಎಲ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇಂದಿನಿಂದ ಡಿ. 24ರವರೆಗೆ ಮುಂಡಗೋಡದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮವೊಂದರಲ್ಲಿ ದಲೈಲಾಮಾ ಹಾಗೂ ಅವರ ಹನ್ನೆರಡು ಮಂದಿ ಅನುಚರರು ಭಾಗವಹಿಸಲಿದ್ದಾರೆ.

ಬುಧವಾರ (ಡಿ.11) ರಂದು ದಲೈಲಾಮಾ ಗೋವಾದ ಪಣಜಿಯಲ್ಲಿ ಗೋವಾ ವಿಶ್ವವಿದ್ಯಾಲಯವು ಆಯೋಜಿಸಿದ್ದ “ನಮ್ಮ ಆಧುನಿಕ ಕಾಲದಲ್ಲಿ ಪ್ರಾಚೀನ ನಳಂದ ಬೋಧನೆಗಳ ಪ್ರಸ್ತುತತೆ” ಕುರಿತು ಉಪನ್ಯಾಸ ನೀಡಿದ್ದಾರೆ.

ಮುಂಡಗೋಡದಲ್ಲಿ ಡಿಸೆಂಬರ್ 24ರವರೆಗೆ ಅವರ ಕಾರ್ಯಕ್ರಮಗಳು ಬೋಧನೆಗಳು ಮತ್ತು ಆತ್ಮವಿಶ್ವಾಸ ಹೆಚ್ಚಿಸಬಲ್ಲ ಉಪನ್ಯಾಸದ ಕಾರ್ಯಕ್ರಮಗಳು ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT