ಕಲಬುರ್ಗಿ: ಡಿಫ್ತೀರಿಯಾಗೆ 7 ಮಂದಿ ಬಲಿ
ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಜ್ವರಗಳ ಸರಣಿ ಆರಂಭವಾಗಿದ್ದು, ಅತ್ತ ಕಲಬುರ್ಗಿಯಲ್ಲಿ ಡಿಫ್ಕೀರಿಯಾಗೆ (ಗಂಟಲಮಾರಿ) 7 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಲಬುರ್ಗಿ: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಜ್ವರಗಳ ಸರಣಿ ಆರಂಭವಾಗಿದ್ದು, ಅತ್ತ ಕಲಬುರ್ಗಿಯಲ್ಲಿ ಡಿಫ್ಕೀರಿಯಾಗೆ (ಗಂಟಲಮಾರಿ) 7 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಕಲಬುರ್ಗಿ ಜಿಲ್ಲಾಧಿಕಾರಿ ಎಂಕೆ ಪಾಟೀಲ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕಳೆದ ಸೆಪ್ಟೆಂಬರ್ 2019ರಿಂದ ಈ ವರೆಗೂ ಜಿಲ್ಲೆಯಲ್ಲಿ 134ಕ್ಕೂ ಹೆಚ್ಚು ಡಿಫ್ತೀರಿಯಾ ಪ್ರಕರಣಗಳು ದಾಖಲಾಗಿದೆ. ಈ ಪೈಕಿ 7 ಮಂದಿ ಗಂಭೀರವಾಗಿ ಬಳಿಕ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
'ಕಳೆದ ಸೆಪ್ಚೆಂಬರ್ ನಿಂದ ಜಿಲ್ಲೆಯ ವಿವಿಧ ಆಸ್ಪತ್ರಗೆಳಲ್ಲಿ ಸುಮಾರು 134 ಡಿಫ್ತೀರಿಯಾ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ಹಲವು ಆಸ್ಪತ್ರೆಗಳಲ್ಲಿ ದಾಖಲಾಗಿರುವವರ ಪೈಕಿ ಹಲವರು ಗಂಭೀರವಾಗಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಈ ಕುರಿತಂತೆ ರಾಜ್ಯ ಸರ್ಕಾರದ ವತಿಯಿಂದ ಜಾಗೃತಿ ಅಭಿಯಾನ ನಡೆಸಲಾಗುವುದು ಎಂದು ಎಂಕೆ ಪಾಟೀಲ್ ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.