ಸಿದ್ದರಾಮಯ್ಯ-ಪೀರಪ್ಪ ಕಟ್ಟೀಮನಿ 
ರಾಜ್ಯ

ಟಗರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ 'ಹೌದೋ ಹುಲಿಯಾ' ಪೀರಪ್ಪ ಕಟ್ಟೀಮನಿ

ಉಪ ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರ ಭಾಷಣದ ಸಂದರ್ಭದಲ್ಲಿ ವ್ಯಕ್ತಿಯೋರ್ವ ಹೌದೋ ಹುಲಿಯಾ ಎಂದು ಹೇಳಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

ಬೆಂಗಳೂರು: ಉಪ ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರ ಭಾಷಣದ ಸಂದರ್ಭದಲ್ಲಿ ವ್ಯಕ್ತಿಯೋರ್ವ ಹೌದೋ ಹುಲಿಯಾ ಎಂದು ಹೇಳಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

ನಂತರ ಸಿದ್ದರಾಮಯ್ಯನವರ ಹಲವು ಭಾಷಣಗಳ ವೇಳೆ ಕಾರ್ಯಕರ್ತರು ಹೌದೋ ಹುಲಿಯಾ ಎಂದು ಕರೆಯುತ್ತಿದ್ದರು. ಸ್ವತಃ ಸಿದ್ದರಾಮಯ್ಯನವರೇ ಹೌದೋ ಹುಲಿಯಾ ವೈರಲ್ ಆಗಿರುವುದಾಗಿ ಹೇಳಿದ್ದರು. 

ಉಪ ಚುನಾವಣೆಯ ಬಳಿಕ ಸಿದ್ದರಾಮಯ್ಯ ಅವರು ಆ್ಯಂಜಿಯೋ ಪ್ಲಾಸ್ಟಿ ಚಿಕಿತ್ಸೆ ಒಳಗಾಗಿ ಇದೀಗ ಡಿಸ್ಜಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರನ್ನು ಕಾಣಲು ರಾಜಕೀಯ ಮುಖಂಡರು, ಧಾರ್ಮಿಕ ಮುಖಂಡರು ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಈ ಮಧ್ಯೆ ಹೌದೋ ಹುಲಿಯಾ ಎಂದು ಹೇಳಿದ್ದ ಪೀರಪ್ಪ ಕಟ್ಟೀಮನಿ ಸಹ ಸಿದ್ದರಾಮಯ್ಯನವರನ್ನು ಭೇಟಿ ಆರೋಗ್ಯ ವಿಚಾರಿಸಿದರು. 

ಈ ಬಗ್ಗೆ ಸಿದ್ದರಾಮಯ್ಯನವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಕಾಗವಾಡದಲ್ಲಿ ನನ್ನ ಭಾಷಣದ ವೇಳೆ "ಹೌದೋ ಹುಲಿಯಾ" ಅಂತ‌ ಅವನದ್ದೇ ಶೈಲಿಯಲ್ಲಿ ಪ್ರೀತಿಯಿಂದ ಕೂಗಿದ್ದ ಈ ಪೀರಪ್ಪ ಕಟ್ಟೀಮನಿ. ಅಷ್ಟೇ ಪ್ರೀತಿಯಿಂದ ಇಂದು ನನ್ನ ಆರೋಗ್ಯ ವಿಚಾರಿಸಲು ಬಂದಿದ್ದಾನೆ. ಇಂಥ ನಿಷ್ಕಲ್ಮಶ ಪ್ರೀತಿ ತುಂಬಿದ ಹೃದಯದ ಈತನೇ ನಿಜವಾದ 'ಹುಲಿಯಾ'.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT