ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ 
ರಾಜ್ಯ

ಮುನಿಸು ಮರೆತು ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್

ಬಿಜೆಪಿ ಸಂಸದ, ಕೇಂದ್ರದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಬೆಂಗಳೂರು: ಬಿಜೆಪಿ ಸಂಸದ, ಕೇಂದ್ರದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪ್ರಸಾದ್, ಸಿದ್ದರಾಮಯ್ಯ ಆರೋಗ್ಯ ವಿಚಾರಿಸಲು ಬಂದಿದ್ದಾಗಿ ಹೇಳಿದರು.

ಸಂಸತ್ ಚಳಿಗಾಲದ ಅಧಿವೇಶನದ ಕಾರಣ ಈ ಹಿಂದೆ ಅವರನ್ನು ಭೇಟಿಯಾಗಲಾಗಿರಲಿಲ್ಲ. ಒಂದೇ ಜಿಲ್ಲೆಯವರಾದ್ದರಿಂದ ಇಬ್ಬರೂ ಆತ್ಮೀಯರಾಗಿದ್ದು, ಬಹಳ ದಿನಗಳ ನಂತರದ ಭೇಟಿಯಾಗಿದ್ದೇನೆ. ಸಿದ್ದರಾಮಯ್ಯ ಆದಷ್ಟು ಬೇಗ ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.

ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಸಿದ್ದರಾಮಯ್ಯ ಅವರ ವಿರುದ್ಧ ಕಟು ಟೀಕೆಗಳನ್ನು ಮಾಡುತ್ತಲೇ ಪಕ್ಷ ತೊರೆದಿದ್ದ ದಲಿತ ನಾಯಕ ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌, ಇತ್ತೀಚಿನ ಕಾಂಗ್ರೆಸ್‌ ಸಭೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರಿದ್ದ ಅವರು ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಗೆ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದರು. ಚುನಾವಣೆ ಸೋಲು ಇಬ್ಬರೂ ನಾಯಕರ ನಡುವಿನ ಮುನಿಸನ್ನು ಮತ್ತಷ್ಟು ಹೆಚ್ಚಿಸಿತ್ತು.

ನಂತರದ ದಿನಗಳಲ್ಲಿ ಶ್ರೀನಿವಾಸ ಪ್ರಸಾದ್‌ ಅವರು ಹಲವು ವೇದಿಕೆಗಳಲ್ಲಿ ಸಿದ್ದರಾಮಯ್ಯ ಅವರನ್ನು ಏಕ ವಚನದಲ್ಲೇ ಟೀಕಿಸಿದ್ದರು. ಸದ್ಯ ಸಿದ್ದರಾಮಯ್ಯ ಅವರ ಅನಾರೋಗ್ಯ ಇಬ್ಬರೂ ನಾಯಕರನ್ನು ಒಂದೆಡೆ ಬೆಸೆದಿದ್ದು,  ಈ  ಭೇಟಿ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT