ಯಡಯೂರಪ್ಪ 
ರಾಜ್ಯ

ಎಸಿಬಿ ತನಿಖೆಗೆ ಬಿಡಿಎ ಕಾಮಗಾರಿ, ಹೈಕೋರ್ಟ್ ಆದೇಶಕ್ಕೆ ಮುಖ್ಯಮಂತ್ರಿ ಸ್ವಾಗತ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳ ತನಿಖೆಗೆ ಹೈಕೋರ್ಟ್ ಆದೇಶ ನೀಡಿರುವುದಕ್ಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಸ್ವಾಗತಿಸಿದ್ದಾರೆ.

ಬೆಂಗಳೂರು:  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳ ತನಿಖೆಗೆ ಹೈಕೋರ್ಟ್ ಆದೇಶ ನೀಡಿರುವುದಕ್ಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಸ್ವಾಗತಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿಗಳ ಬಗ್ಗೆ ಕಳೆದ ಒಂದೆರಡು ವರ್ಷಗಳಲ್ಲಿ ನಡೆದ ಗುತ್ತಿಗೆ ಕೆಲಸಗಳ ತನಿಖೆ ಆಗಬೇಕು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಜೊತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಳಪೆ ಕಾಮಗಾರಿಗಳನ್ನು ಕೂಡ ಎಸಿಬಿ ತನಿಖೆ ವೇಳೆ ಗಣನೆಗೆ ತೆಗೆದುಕೊಳ್ಳಬೇಕು.

ಬಿಡಿಎ ಮತ್ತು ಬಿಬಿಎಂಪಿಯಲ್ಲಿ ಅನೇಕ ಕಾಮಗಾರಿಗಳು, ಅದರಲ್ಲೂ ರಸ್ತೆ ಕಾಮಗಾರಿಗಳು ಕಳಪೆಯಾಗಿವೆ. ಅಧಿಕಾರಿಗಳು, ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳುವಂತೆ ಮಾಡುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ತನಿಖೆ ಸಮಗ್ರವಾಗಿರಬೇಕು ಮತ್ತು ಎಸಿಬಿಯು ಆರು ತಿಂಗಳು ಗಡುವಿಗೆ ಕಾಯದೆ ಆದಷ್ಟು ಬೇಗ ವರದಿ ನೀಡಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕಳಪೆ ಕಾಮಗಾರಿಗಳು ಯಾವುವು ಎಂದು ಗೊತ್ತಾದರೆ ಅವುಗಳಿಗೆ ಸರ್ಕಾರ ನೀಡುವ ಹಣವನ್ನು ತಡೆಹಿಡಿಯಬಹುದು. ನನ್ನ ಸರ್ಕಾರ ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿಗೆ ಆಸ್ಪದ ನೀಡುವುದಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಸರಕಾರ ಬಿಡಿಎ ಮತ್ತು ಬಿಬಿಎಂಪಿ ಕಾಮಗಾರಿಗಳು, ಅದರಲ್ಲೂ ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಅತ್ಯಂತ ವಿಶೇಷವಾಗಿ ಮತ್ತು ಸೂಕ್ಷ್ಮವಾಗಿ ಗಮನಿಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!