ರಾಜ್ಯ

ಐಟಿ, ಇಡಿ ಅಧಿಕಾರಿಗಳಿಂದ ಕಿರುಕುಳ ಆರೋಪ: 'ಹೈ' ಮೆಟ್ಟಿಲೇರಿದ ಡಿಕೆಶಿ ತಾಯಿ

Manjula VN

ಬೆಂಗಳೂರು: ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶಾನಲಯ ಸಮನ್ಸ್ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಜಿ.ನರೇಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆದಿದೆ. ಜಾರಿ ನಿರ್ದೇಶನಾಲಯ ಹಾಗೂ ತೆರಿಗೆ ಇಲಾಖೆಯ ಅಧಿಕಾರಿಗಳು ನನ್ನ ಮತ್ತು ನಮ್ಮ ಕುಟುಂಬದ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ಹೀಗಾಗಿ 2019ರ ಅ.9ರಂದು ನನ್ನ ವಿರುದ್ಧ ಜಾರಿಗೊಳಿಸಿರುವ ಸಮನ್ಸ್'ನ್ನು ರದ್ದುಗೊಳಿಸಲು ನಿರ್ದೇಶನ ನೀಡಬೇಕೆಂದು ಗೌರಮ್ಮ ಅವರು ಮನವಿ ಮಾಡಿಕೊಂಡಿದ್ದಾರೆ. 

ಅರ್ಜಿಯನ್ನು ವಿಚಾರಣೆ ನಡೆಸಿರುವ  ನ್ಯಾಯಪೀಠ, ಗೌರಮ್ಮ ಅವರು 85 ವರ್ಷದ ವೃದ್ದೆಯಾಗಿದ್ದು, ತನಿಖೆಗಾಗಿ ನವದೆಹಲಿಗೆ ಪ್ರಯಾಣ ಬೆಳೆಸಲು ಸಾಧ್ಯವಿಲ್ಲ. ಹೀಗಾಗಿ ಅವರ ಹೇಳಿಕೆಯನ್ನು ಅವರ ಮನೆಯಲ್ಲಿಯೇ ದಾಖಲಿಸಲು ಸಾಧ್ಯವೇ ಎಂಬುದರ ಬಗ್ಗೆ ಬುಧವಾರದೊಳಗಾಗಿ ಸ್ಪಷ್ಟನೆ ನೀಡುವಂತೆ ಜಾರಿ ನಿರ್ದೇಶನಾಲಯದ ಸಲಹೆಗಾರರಿಗೆ ಸೂಚಿಸಿದೆ. ಅಲ್ಲದೆ, ವಿಚಾರಣೆಯನ್ನು ಮುಂದೂಡಿದೆ. 

SCROLL FOR NEXT