ರಾಜ್ಯ

ಕನಕಪುರದ ನಿವಾಸದಲ್ಲೇ ಡಿಕೆಶಿ ತಾಯಿ ಗೌರಮ್ಮ ವಿಚಾರಣೆಗೆ ಹೈಕೋರ್ಟ್ ಆದೇಶ

Lingaraj Badiger

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಅವರನ್ನು ಅವರ ಕನಕಪುರದ ನಿವಾಸದಲ್ಲೇ ವಿಚಾರಣೆ ನಡೆಸುವಂತೆ ಜಾರಿ ನಿರ್ದೇಶನಾಲಯದ(ಇ.ಡಿ)ಅಧಿಕಾರಿಗಳಿಗೆ ಹೈಕೋರ್ಟ್ ಆದೇಶಿಸಿದೆ.
  
ಜಾರಿ ನಿರ್ದೇಶನಾಲಯ ತಮಗೆ ಸಮನ್ಸ್ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಗೌರಮ್ಮ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ‌.ನರೇಂದರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
  
ಗೌರಮ್ಮ ಅವರನ್ನು ಕನಕಪುರದ ಸ್ವಗೃಹದಲ್ಲೇ ವಿಚಾರಣೆ ನಡೆಸಬೇಕು. ವಿಚಾರಣೆಯನ್ನು ಕನ್ನಡದಲ್ಲೆ ನಡೆಸುವುದರ ಜೊತೆಗೆ, ವಿಚಾರಣೆಯ ಧ್ವನಿ ಮುದ್ರಣ ಮಾಡುವಂತೆ ನ್ಯಾಯಪೀಠ ಸೂಚನೆ ನೀಡಿದೆ.
  
ವಿಚಾರಣೆ ವೇಳೆ ಇ.ಡಿ.ಅಧಿಕಾರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿಗೆ ನ್ಯಾಯಪೀಠ ನಿರ್ದೇಶಿಸಿದ್ದು, ವಿಚಾರಣೆಗೆ ಅಡ್ಡಿಪಡಿಸದಂತೆ ಗೌರಮ್ಮ ಅವರಿಗೂ ಎಚ್ಚರಿಕೆ ನೀಡಿದೆ.
  
ತಮಗೆ 85 ವರ್ಷವಾಗಿದ್ದು, ತಾವು ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಬದಲಿಗೆ ತಮ್ಮ ಪರವಾಗಿ ಪ್ರತಿನಿಧಿ ಕಳುಹಿಸಲು ಇಲ್ಲವೇ ಸ್ವಗೃಹದಲ್ಲಿ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ಗೌರಮ್ಮ ರಿಟ್ ಅರ್ಜಿ ಸಲ್ಲಿಸಿದ್ದರು.

SCROLL FOR NEXT