ರಾಜ್ಯ

ಬೆಂಗಳೂರು: ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ

Raghavendra Adiga

ಬೆಂಗಳೂರು: ಬಿಎಂಟಿಸಿ ಮಹಿಳಾ ಕಂಡಕ್ಟರ್ ಓರ್ವಳ ಮೇಲೆ ಸ್ಕೂಟರ್ ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತುಮಕೂರಿನ ಶಿರಾ ಮೂಲದವರಾದ ಇಂದಿರಾ ಬಾಯಿ (35) ಆ್ಯಸಿಡ್ ದಾಳಿಗೊಳಗಾದ ನತದೃಷ್ಟ ಕಂಡಕ್ಟರ್ ಆಗಿದ್ದಾರೆ. ಈಕೆ ಬೆಂಗಳೂರಿನ ಹಾವನೂರು ಬಡಾವಣೆಯಲ್ಲಿ ವಾಸವಿದ್ದರು. ಪೀಣ್ಯ 9ನೇ ಡಿಪೋದ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಇಂದಿರಾ ಇಂದು ಮುಂಜಾನೆ ಮನೆಯಿಂದ ಡಿಪೋಗೆ ನಡೆದು ಹೀಗುತ್ತಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಇಂದಿರಾ ಅವರ ದೇಹದ ಬಲಭಾಗಕ್ಕೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆ್ಯಸಿಡ್ ದಾಳಿಗೊಳಗಾದ ಇಂದಿರಾ ಅವರ ಮುಖ, ಕೈ ಮತ್ತಿತರೆ ಭಾಗಗಳುಇ ಸುಟ್ಟುಹೋಗಿದ್ದು ಸಧ್ಯ ಆಕೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಗೆ ನಿಖರ ಕಾರಣವಿನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT