ರಾಜ್ಯ

ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಬೇಡಿ, ಪೊಲೀಸರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರ್ದೇಶನ

Nagaraja AB

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲೂ ಪ್ರತಿಭಟನೆ ತೀವ್ರಗೊಂಡಿದೆ. ಬೆಂಗಳೂರು, ಮಂಗಳೂರು, ಕಲಬುರಗಿ, ಸೇರಿದಂತೆ ರಾಜ್ಯದ ವಿವಿಧೆಡೆ ಮುಸ್ಲಿಂ ಹಾಗೂ ಎಡಪಂಥೀಯ ಸಂಘಟನೆಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು, ಹಲವು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿದ್ದ ಇತಿಹಾಸಕಾರ ರಾಮಚಂದ್ರಗುಹಾ, ಶಾಸಕ ರಿಜ್ವಾನ್ ಅರ್ಷಾದ್ ಮತ್ತಿತರರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮಧ್ಯೆ  ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡದಂತೆ  ಪೊಲೀಸರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಯಾವುದೇ ಕಾರಣಕ್ಕೂ ಶಾಂತಿ ಕಡಡಲು ಬಿಡದಂತೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಡಿನ ಜನತೆಯಲ್ಲಿ ಕಳಕಳಕಿಯ ಮನವಿ ಮಾಡಿದ್ದಾರೆ.  ಪೌರತ್ವ ಕಾಯ್ದೆ ಬಗ್ಗೆ ತಪ್ಪು ಮಾಹಿತಿ ಬಿತ್ತಲಾಗುತ್ತಿದೆ. ರಾಜಕೀಯ ದುರುದ್ದೇಶದಿಂದ ಯಾರೇ ಪ್ರಚೋದನಕಾರಿ ಹೇಳಿಕೆ ಕೊಟ್ಟರೂ ಕಿವಿಗೂಡದಿರಿ. ಕಿಡಿಗೇಡಿಗಳ ಮಾತಿಗೆ ಕಿವಿಗೊಟ್ಟು ಸಮಾಜದ ಸ್ವಾಸ್ಥ್ಯ ಕದಡದಿರಿ, ಸಾರ್ವಜನಿಕ ಆಸ್ತಿ ನಾಶ ಮಾಡದಿರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಜನರ ಆಶಯಗಳಿಗೆ ಧಕ್ಕೆ ತರಬೇಡಿ ಎಂದು ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ನಾಯಕರಿಗೆ ಅವರು ಕೋರಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ, ಅದು ದೇಶದ ಕಾನೂನು . ಇದರಿಂದ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆ ಇಲ್ಲ ಮತ್ತು ಆತಂಕಕಕ್ಕೆ ಒಳಪಡುವ ಅವಶ್ಯಕತೆ ಇಲ್ಲ. ದೇಶದ ನಾಗರಿಕರಿಗೆ ಇದರಿಂದ ತೊಂದರೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

SCROLL FOR NEXT