ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಜಿಲ್ಲೆಯಾದ್ಯಂತ ಮುಂದಿನ 48 ಗಂಟೆ ಇಂಟರ್ ನೆಟ್ ಸ್ಧಗಿತಗೊಳಿಸಲಾಗಿದ್ದು 22ರವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ 48 ಗಂಟೆ ಇಂಟರ್ ನೆಟ್ ಸೇವೆ ಸ್ಧಗಿತಗೊಳಿಸಲಾಗಿದೆ ಎಂದು ಕರ್ನಾಟಕ ಗೃಹ ಸಚಿವಾಲಯ ಆದೇಶಿಸಿದೆ.
ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದರು.
ಮೃತ ಪ್ರತಿಭಟನಾಕಾರರು ಬೆಂಗ್ರೆ ನಿವಾಸಿ 23 ವರ್ಷದ ನೌಶೀನ್ ಮತ್ತು 49 ವರ್ಷದ ಜಲೀಲ್ ಎಂದು ತಿಳಿದುಬಂದಿದೆ.