ರಾಜ್ಯ

ಅರ್ಹ ಬಿಜೆಪಿ ನಾಯಕರಿಗೆ ರಾಜ್ಯಪಾಲರ ಹುದ್ದೆ ಲಭಿಸಿಲ್ಲ: ಶಂಕರಮೂರ್ತಿ

Shilpa D

ಬೆಂಗಳೂರು: ಕಳೆದ 6 ವರ್ಷಗಳಿಂದ ರಾಜ್ಯ ಬಿಜೆಪಿ ಮುಖಂಡರಿಗೆ ಯಾವುದೇ ಉನ್ನತ ಸ್ಥಾನಗಳು ಲಭಿಸಿಲ್ಲಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಆದರೂ ಏನು ಪ್ರಯೋಜನ. ಅಟಲ್​​​​ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ರಾಮಾ ಜೋಯಿಸ್ ಅವರಿಗೆ ಮಾತ್ರ ರಾಜ್ಯಪಾಲರಾಗುವ ಅವಕಾಶ ಸಿಕ್ಕಿತ್ತು. ಆ ನಂತರ ಯಾರಿಗೂ ಅವಕಾಶ ಒದಗಿ ಬಂದಿಲ್ಲ. ರಾಜ್ಯದಲ್ಲಿ ಸಾಕಷ್ಟು ಅರ್ಹರಿದ್ದರೂ ಪರಿಗಣಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗಾಗಲೇ 75 ವರ್ಷ ವಯಸ್ಸಾಗಿದೆ. ಹೀಗಾಗಿ ನನಗೆ ಆ ಹುದ್ದೆ ನೀಡಲು ಸಾಧ್ಯವಿಲ್ಲ, ರಾಜ್ಯದವರಿಗೆ ಸೂಕ್ತ ಸ್ಥಾನ ದೊರೆತಿಲ್ಲ. ತಾವೂ ರಾಜ್ಯಪಾಲರ ಹುದ್ದೆ ಅಲಂಕರಿಸುವ ಕುರಿತು ಸುದ್ದಿ ಹರಡಿತ್ತು. ಅದು ನಿಜವಾಗಲಿಲ್ಲ ಎಂದು ಅಳಲು ತೋಡಿಕೊಂಡರು.

SCROLL FOR NEXT