ವಿಜಯಾ 
ರಾಜ್ಯ

ಪ್ರಶಸ್ತಿ ವಾಪಸ್ ಮಾಡುವುದಿಲ್ಲ, ಆದರೆ ಇದು ಸರ್ವಾಧಿಕಾರಿ ಸರ್ಕಾರ: ಡಾ ವಿಜಯಾ

ಕೇಂದ್ರ  ಸಾಹಿತ್ಯ ಅಕಾಡೆಮಿ ನನ್ನ 'ಕುದಿ ಎಸರು' ಕೃತಿಗೆ ಕೊಟ್ಟಿರುವ ಪ್ರಶಸ್ತಿಯನ್ನು ನಾನು ಹಿಂದಿರುಗಿಸುವುದಿಲ್ಲ ಎಂದು ಲೇಖಕಿ ಡಾ. ವಿಜಯಾ ಖಚಿತ ಮಾತುಗಳಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಕೇಂದ್ರ  ಸಾಹಿತ್ಯ ಅಕಾಡೆಮಿ ನನ್ನ 'ಕುದಿ ಎಸರು' ಕೃತಿಗೆ ಕೊಟ್ಟಿರುವ ಪ್ರಶಸ್ತಿಯನ್ನು ನಾನು ಹಿಂದಿರುಗಿಸುವುದಿಲ್ಲ ಎಂದು ಲೇಖಕಿ ಡಾ. ವಿಜಯಾ ಖಚಿತ ಮಾತುಗಳಲ್ಲಿ ತಿಳಿಸಿದ್ದಾರೆ.

ಇಂದು 'ಅವಧಿ' ಅಂತರ್ಜಾಲ ಪತ್ರಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಪ್ರಶಸ್ತಿ ನನಗೆ ವಯಕ್ತಿಕವಾಗಿ ಕೊಟ್ಟ ಪ್ರಶಸ್ತಿ ಅಲ್ಲ. ಇದು ಮಹಿಳಾ ಲೋಕದ ದನಿಗೆ ಕೊಟ್ಟ ಪ್ರಶಸ್ತಿ.  ವೈದೇಹಿ ಅವರಿಗೆ ಪ್ರಶಸ್ತಿ ನೀಡಿದ 10 ವರ್ಷಗಳ ನಂತರ ಇನ್ನೊಬ್ಬ ಲೇಖಕಿಗೆ ಈ ಪ್ರಶಸ್ತಿ ಸಿಕ್ಕಿದೆ. ಹಾಗಾಗಿ ಈ ಪ್ರಶಸ್ತಿಯನ್ನು ಸ್ವೀಕರಿಸುವುದೂ ಒಂದು ಪ್ರತಿಭಟನೆಯೇ ಎಂದು ಅವರು ತಿಳಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಸ್ವಾಯತ್ತವಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆ. ಇದು ಸರ್ಕಾರದ ಪ್ರಶಸ್ತಿ ಅಲ್ಲ ಎಂದ ಅವರು, ನಾನು ಇದುವರೆಗೂ ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಯನ್ನಾಗಲೀ, ಅತ್ತಿಮಬ್ಬೆ ಪ್ರಶಸ್ತಿಯನ್ನಾಗಲೀ ಸ್ವೀಕರಿಸಿಲ್ಲ. ಆದರೆ  ಅಕಾಡೆಮಿಗಳು ನೀಡುವ ಪ್ರಶಸ್ತಿಯನ್ನು ಸ್ವೀಕರಿಸುತ್ತಲೇ ಬಂದಿದ್ದೇನೆ. ಹೀಗಾಗಿ ಈ ಪ್ರಶಸ್ತಿ ವಾಪಸ್ ಮಾಡುವ ಪ್ರಶ್ನೆಯೇ ಬರುವುದಿಲ್ಲ ಎಂದಿದ್ದಾರೆ.

ಈ ಕೃತಿಯಲ್ಲೂ ನಾನು ಸಂಘ ಪರಿವಾರವನ್ನೂ ಸಹ ನೇರವಾಗಿ ಪ್ರಶ್ನಿಸಿದ್ದೇನೆ. ಈ ಪ್ರಶಸ್ತಿಗಳಿಂದ ನನ್ನ ಮಾತನ್ನು, ನನ್ನ ಹೋರಾಟವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ. ನಾನು ಯಾವತ್ತೂ ಹೋರಾಟದ ಅಂಗಳದಲ್ಲಿರುವವಳು ಹಾಗೂ ನಿರ್ಭಿಡೆಯ ಮಾತನ್ನಾಡುವವಳು ಎಂದು ಅವರು ನೇರವಾಗಿ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯಿದೆಯ ಔಚಿತ್ಯವನ್ನು ಪ್ರಶ್ನಿಸಿದ ಅವರು, ತುರ್ತು ಪರಿಸ್ಥಿತಿಯನ್ನೂ ಮೀರಿದ ಒಂದು ಭಯಾನಕ ಪರಿಸ್ಥಿತಿ ನಮ್ಮ ಮುಂದಿದೆ. ಈ ವ್ಯವಸ್ಥೆಗೆ ಯಾರನ್ನೂ ಕೇಳುವ ಮನಸ್ಸಿಲ್ಲ. ಇದು ಸಂಪೂರ್ಣವಾಗಿ ಸರ್ವಾಧಿಕಾರಿ ಸರ್ಕಾರ ಎಂದು ಆತಂಕ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT