ರಾಜ್ಯ

ಪುರಭವನ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ಪ್ರತಿಭಟನೆಗೆ ನಿರ್ಬಂಧ; ಕಲಬುರಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ 

Sumana Upadhyaya

ಬೆಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 6 ಗಂ ಟೆಯಿಂದ ಶನಿವಾರ ಮಧ್ಯರಾತ್ರಿ ವರೆಗೆ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.


ನಿಷೇಧಾಜ್ಞೆ ಉಲ್ಲಂಘಿಸಿದ್ದವರ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿ ಕ್ರಮಕೈಗೊಳ್ಳುವಂತೆ ಆಯುಕ್ತರು ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.


ನಗರದಲ್ಲಿ ಬಿಗಿ ಭದ್ರತೆಗಾಗಿ 53 ಕೆಎಸ್ ಆರ್ ಪಿ, 30 ಸಿಎಆರ್ ತುಕಡಿಯನ್ನು ನಿಯೋಜಿಸಲಾಗಿದ್ದು, ಹಗಲು ರಾತ್ರಿ ಗಸ್ತಿನಲ್ಲಿದ್ದು, ನಿಗಾವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದ್ದಾರೆ.


ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.


ವಿವಿಧ ಸಂಘಟನೆಗಳು ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದ್ದು, ಇಂದು ಬೆಳಿಗ್ಗೆ 6 ಗಂಟೆಯಿಂದ ಶನಿವಾರದ ಮಧ್ಯರಾತ್ರಿವರೆಗೂ ನಗರ ಹಾಗೂ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಎಂದಿನಂತೆ ಸಾರಿಗೆ ಬಸ್ಸು ಹಾಗೂ ಖಾಸಗಿ ವಾಹನಗಳು ಸಂಚರಿಸುತ್ತಿದ್ದು, 10 ಗಂಟೆಯ ನಂತರ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. 

SCROLL FOR NEXT