ಭಾರತೀಯ ಮುಸ್ಲಿಂರಿಗೆ ಪೌರತ್ವ ಕಾಯ್ದೆಯಿಂದ ಸಮಸ್ಯೆಯಿಲ್ಲ, ಕಾಯ್ದೆ 'ಸುಪ್ರೀಂ' ಅಗ್ನಿ ಪರೀಕ್ಷೆ ಪಾಸಾಗಲಿದೆ: ತೇಜಸ್ವಿ ಸೂರ್ಯ
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯ ಮುಸ್ಲಿಂರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗುವುದಿಲ್ಲ. ಇದು ಮೂರು ದೇಶಗಳ ಅಲ್ಪ ಸಂಖ್ಯಾತರಿಗೆ ಪೌರತ್ವ ಕೊಡುವ ಕಾನೂನು. ಇನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯ ಮುಸ್ಲಿಂರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗುವುದಿಲ್ಲ. ಇದು ಮೂರು ದೇಶಗಳ ಅಲ್ಪ ಸಂಖ್ಯಾತರಿಗೆ ಪೌರತ್ವ ಕೊಡುವ ಕಾನೂನು. ಇನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇನ್ನು ಪೌರತ್ವ ಕಾಯ್ದೆ ಬಗ್ಗೆ ಮಾಹಿತಿ ಇಲ್ಲದೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಇದು ಭಾರತದ ಮುಸ್ಲಿಂರ ಪೌರತ್ವ ಕಸಿಯುವ ಕಾನೂನು ಅಲ್ಲ ಎಂದರು.
ಅಡ್ವಕೇಟ್ಸ್ ಫರ್ ನೇಷನ್ಸ್ ವತಿಯಿಂದ ವಿಚಾರ ಸಂಕೀರ್ಣವನ್ನು ಬೆಂಗಳೂರಿನ ಯವನಿಕ ಆಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ, ಹಿರಿಯ ವಕೀಲ ಬಿವಿ ಆಚಾರ್ಯ, ಉಪ ಲೋಕಾಯುಕ್ತ ಸುಭಾಷ್ ಅಡಿ ಸೇರಿದಂತೆ ನೂರಾರು ಸಾರ್ವಜನಿಕರು ಭಾಗಿಯಾಗಿದ್ದರು.
ಈ ವೇಳೆ ತೇಜಸ್ವಿ ಸೂರ್ಯ ಮಾಡನಾಡಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ತಪ್ಪ ಮಾಹಿತಿ ನೀಡಲಾಗುತ್ತಿದೆ. ಈ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಪೌರತ್ವ ತಿದ್ದುಪಡಿ ಮಸೂದೆ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಸಿಂಧುತ್ವ ಪರೀಕ್ಷೆಯಲ್ಲಿ ಪಾಸಾಗಲಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.