ರಾಜ್ಯ

ಜಲವಿವಾದ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ: ಹೆಚ್.ಕೆ.ಪಾಟೀಲ್

Manjula VN

ಹುಬ್ಬಳ್ಳಿ: ಕಳಸಾ-ಬಂಡೂರಿ ಯೋಜನೆಗೆ ಕುರಿತ ಸಮಸ್ಯೆ ಪರಿಹಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆ ಅತ್ಯಗತ್ಯ ಎಂದು ಕಾಂಗ್ರೆಸ್ ಶಾಸಕ ಹೆಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಪಾಟೀಲ್ ಅವರು, ಪರಿಸರ ಅನುಮತಿಯನ್ನು ಉ್ಲಂಘನೆ ಮಾಡಲಾಗಿದೆ. ವಿಶೇಷ ರಜೆ ಬಗ್ಗೆ ಗೋವಾ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿ ಕೇವಲ ಒಂದು ಕಾರಣವಷ್ಟೇ. ವಿವಾದದಿಂದ ಕೇಂದ್ರ ಸರ್ಕಾರ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ. 

ನ್ಯಾಯಮಂಡಳಿಯ ಆದೇಶಕ್ಕೆ ಕೇಂದ್ರ ಸರ್ಕಾರ ಅಗೌರವ ತೋರಿಸಿದೆ. ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಯೋಜನೆ ಅನುಷ್ಠಾನದ ಅಗತ್ಯತೆ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುವ ಅಗತ್ಯವಿದೆ. ರಾಜ್ಯ ಸಾಕಷ್ಟು ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈಗಾಗಲೇ ರಾಜ್ಯಕ್ಕೆ ಅತ್ಯಂತ ಕಡಿಮೆ ನೀರು ದೊರಕುತ್ತಿದ್ದು, ರಾಜ್ಯ ಸರ್ಕಾರ ಕಾನೂನು ಸಮರವನ್ನು ಮುಂದುವರೆಸಬೇಕೆಂದು ತಿಳಿಸಿದ್ದಾರೆ. 

SCROLL FOR NEXT