ವಿಶ್ವೇಶತೀರ್ಥ ಸ್ವಾಮೀಜಿ 
ರಾಜ್ಯ

ವಿಶ್ವೇಶ ತೀರ್ಥ ಸ್ವಾಮೀಜಿ ಆರೋಗ್ಯ ವಿಚಾರಿಸಲು ಗಣ್ಯರ ದಂಡು 

ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ವಿಚಾರಿಸಲು ಗಣ್ಯರ ದಂಡೆ ಹರಿದು ಬರುತ್ತಿದೆ.

ಮಣಿಪಾಲ: ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ವಿಚಾರಿಸಲು ಗಣ್ಯರ ದಂಡೆ ಹರಿದು ಬರುತ್ತಿದೆ.

ಈ ನಡುವೆ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಜೊತೆಗೆ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದೆ.  'ನಮ್ಮ ವೈದ್ಯರು ಸತತವಾಗಿ ಶ್ರೀಗಳ ಆರೋಗ್ಯದ ಮೇಲೆ ನಿಗಾ ವಹಿಸಿದ್ದು, ಪರಿಸ್ಥಿತಿ ಸ್ವಲ್ಪ ಇನ್ನೂ ಗಂಭೀರವಾಗಿದೆ. ಆದರೆ, ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ' ಎಂದು ತಿಳಿಸಿದ್ದಾರೆ.  

ಶ್ರೀಗಳನ್ನು ಕಾಣಲು ಭಕ್ತರು ಕೆಎಂಸಿ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆದರೆ, 'ಶ್ರೀಗಳನ್ನು ಕಾಣಲು ಯಾರೂ ಆಸ್ಪತ್ರೆಗೆ ಬರಬೇಡಿ, ರೋಗಿಗಳಿಗೆ ತೊಂದರೆ ಆಗುತ್ತೆ. ಶ್ರೀಗಳು ಆರೋಗ್ಯವಾಗಿದ್ದಾರೆ' ಎಂದು ಶ್ರೀಗಳ ಆಪ್ತ ಕಾರ್ಯದರ್ಶಿ ಭಕ್ತರಲ್ಲಿ ಕೋರಿಕೊಂಡಿದ್ದಾರೆ.

ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಸ್ಪತ್ರೆಗೆ ಭೇಟಿ ನೀಡಿ , ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ.

ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಕೂಡಾ ಇಂದು ಸಂಜೆ ಆಗಮಿಸಿ, ಶ್ರೀಗಳ ಆರೋಗ್ಯ ವಿಚಾರಿಸಲಿದ್ದು, ಉಡುಪಿಯಲ್ಲೇ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್