ಸಿದ್ದರಾಮಯ್ಯ 
ರಾಜ್ಯ

ಸಿಐಡಿ ತನಿಖೆಗೆ ಸಹಮತವಿಲ್ಲ, ನ್ಯಾಯಾಂಗ ತನಿಖೆಯಾಗಬೇಕು: ಸಿದ್ದರಾಮಯ್ಯ

ಮಂಗಳೂರು ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದಕ್ಕೆ ನನಗೆ ಒಪ್ಪಿಗೆಯಿಲ್ಲ, ಮಂಗಳೂರು ಘಟನೆ ಕುರಿತು ನ್ಯಾಯಾಂಗ ತನಿಖೆಯೇ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮ್ಯ ಆಗ್ರಹಿಸಿದ್ದಾರೆ. 

ಮಂಗಳೂರು:  ಮಂಗಳೂರು ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದಕ್ಕೆ ನನಗೆ ಒಪ್ಪಿಗೆಯಿಲ್ಲ, ಮಂಗಳೂರು ಘಟನೆ ಕುರಿತು ನ್ಯಾಯಾಂಗ ತನಿಖೆಯೇ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮ್ಯ ಆಗ್ರಹಿಸಿದ್ದಾರೆ. 

ಕರ್ಫ್ಯೂ ತೆರವಾದ ಬಳಿಕ ಇಂದು ಮಂಗಳೂರಿಗೆ ಭೇಟಿ ನೀಡಿದ ಅವರು, ಗೋಲಿಬಾರ್​ನಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದರು.

ಇದೇ ವೇಳೆ ಘಟನೆಯನ್ನು ಸಿಐಡಿಗೆ ಒಪ್ಪಿಸುವ ನಿರ್ಧಾರ ಸರಿಯಲ್ಲ. ಕಾರಣ ಸಿಐಡಿ ಇರುವುದು ರಾಜ್ಯ ಪೊಲೀಸರ ಕೈಯಲ್ಲಿ. ಗೋಲಿಬಾರ್​ ನಡೆದಿದ್ದು ಕೂಡ ಪೊಲೀಸರಿಂದ. ಹೀಗಾಗಿ ಈ ತನಿಖೆಗೆ ನಮ್ಮ ವಿರೋಧವಿದೆ  ಎಂದರು.

ಘಟನೆಯನ್ನು ಹೈ ಕೋರ್ಟ್​ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು. ನ್ಯಾಯಾಂಗ ತನಿಖೆಯಿಂದ ಮಾತ್ರ ನ್ಯಾಯ ದೊರಕಲು ಸಾಧ್ಯ. ಸಿಎಂ ಸದಾ ಸುಳ್ಳು ಹೇಳುವವರು. ಅವರು ಘಟನೆಯ ಪ್ರತ್ಯಕ್ಷ ದರ್ಶಿಯಲ್ಲ. ಹಾಗಾಗಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!