ರಾಜ್ಯ

ಯಾದಗಿರಿ: ದೇವಾಲಯದ ಊಟ ಸೇವಿಸಿ 50 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

Raghavendra Adiga

ಯಾದಗಿರಿ: ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ಬೆಂಚಿಗಡ್ಡಿ ಗ್ರಾಮದಲ್ಲಿ ಸೋಮವಾರ ಸಮಾರಂಭವೊಂದರಲ್ಲಿ ಊಟ ಮಾಡಿದ ನಂತರ ಕನಿಷ್ಠ 50 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
  
ಪೊಲೀಸರ ಪ್ರಕಾರ, ಭಾನುವಾರ ರಾತ್ರಿ ಶಿಶುವೊಂದರ ಕೂದಲು ಕತ್ತರಿಸುವ ಸಮಾರಂಭದಲ್ಲಿ (ಜಾವಳ)
ಊಟ ಮಾಡಿದ ನಂತರ ಕೆಲವರು ವಾಂತಿ ಮಾಡಲು ಆರಂಭಿಸಿದ್ದಾರೆ. 
  
ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ, ಮಕ್ಕಳು ಸೇರಿದಂತೆ 50 ಕ್ಕೂ ಹೆಚ್ಚು ಜನರು ಇದೇ ತೊಂದರೆಯಿಂದ ಆಸ್ಪತ್ರೆಗೆ ಬಂದಿದ್ದಾರೆ. ಅವರಲ್ಲಿ ಕೆಲವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ಅಸ್ವಸ್ಥರ ಸ್ಥಿತಿ ಗಂಭೀರವಾಗುತ್ತಿದ್ದಂತೆ ಎಲ್ಲರನ್ನೂ ಕಾಕೆರಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.
 
 ಮಕ್ಕಳು ಸೇರಿದಂತೆ ಸಂತ್ರಸ್ತರೆಲ್ಲರಿಗೂ ಇನ್ನೂ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಅವರನ್ನು ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 ‘ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಭೋಜನಕೂಟದಲ್ಲಿ ನೀಡಲಾದ ಆಹಾರದ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮತ್ತು ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಗೆ ಪರೀಕ್ಷೆಗಾಗಿ ಕಳುಹಿಸಲಾಗುವುದು.’ ಎಂದು ಆರೋಗ್ಯಾಧಿಕಾರಿ ಎಂ ಎಂ ರಂಗಪ್ಪ ತಿಳಿಸಿದ್ದಾರೆ.

SCROLL FOR NEXT