ಸಾಂದರ್ಭಿಕ ಚಿತ್ರ 
ರಾಜ್ಯ

ಕೊಳ್ಳೇಗಾಲ: ಟಾಟಾ ಏಸ್ ಪಲ್ಟಿ; 12 ಮಂದಿಗೆ ಗಾಯ, 6 ಜನರ ಸ್ಥಿತಿ ಗಂಭೀರ

ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದರೆ ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚಾಮರಾಜನಗರ: ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದರೆ ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕೊಳ್ಳೇಗಾಲ ತಾಲೂಕಿನ ಮತ್ತಿಪುರ ಕ್ರಾಸ್​​​ನಲ್ಲಿ ಈ ಘಟನೆ ನಡೆದಿದೆ. ನರೀಪುರದಿಂದ 14 ಮಂದಿ ಕೂಲಿ ಕಾರ್ಮಿಕರನ್ನು ಕಬ್ಬು ಕಟಾವಿಗೆ ಕೂಲಿ ಕಾರ್ಮಿಕರನ್ನು ಟಾಟಾ ಏಸ್​​ ವಾಹನದಲ್ಲಿ ಕರೆತರುತ್ತಿದ್ದಾಗ ಈ ಅವಘಡ ಸಂಭವಿಸಿದೆ. 

ಕೊಳ್ಳೇಗಾಲ ಬಳಿ ರಸ್ತೆ ಅಪಘಾತ, 6 ಮಂದಿ ಸ್ಥಿತಿ ಗಂಭೀರಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್​ ಪಲ್ಟಿಯಾಗಿದೆ. 12 ಮಂದಿಗೆ ಗಾಯಗೊಂಡಿದ್ದು, ಅದರಲ್ಲಿ 6 ಕಾರ್ಮಿಕರು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. 

ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸಾಗಿಸಲಾಗಿದೆ.ಉಳಿದ ಗಾಯಾಳುಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಶಾಸಕ ಆರ್. ನರೇಂದ್ರ ಭೇಟಿ ನೀಡಿದ್ದಾರೆ. 

ಚಾಲಕನ ಅಜಾಗರೂಕತೆಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:- ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ ! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ, Video

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

SCROLL FOR NEXT