ಮಂಗಳೂರು ಗಲಭೆ, ಕುಮಾರಸ್ವಾಮಿ 
ರಾಜ್ಯ

ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರು ಗಲಭೆಯದೋ? ಅಥವಾ ಬೇರೆಡೆಯದೋ?-ಕುಮಾರಸ್ವಾಮಿ

ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ಹೊತ್ತು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಜೆಡಿಎಸ್ ನಾಯಕ ಹಾಗೂ ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು: ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ಹೊತ್ತು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಜೆಡಿಎಸ್ ನಾಯಕ ಹಾಗೂ ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಕಲ್ಲು ತೂರಾಟ ಪ್ರಕರಣದಲ್ಲಿ ಸರ್ಕಾರ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ?. ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆ ಕಡೆಯದೋ? ಎಂದು ಪ್ರಶ್ನಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಲಕ್ಷಾಂತರ ಮಂದಿ ಜನ ಸೇರಿದರೂ ಗಲಭೆ ಆಗಲಿಲ್ಲ. ಶಾಂತಿಯುತ ಪ್ರತಿಭಟನೆ ನಡೆಯಿತು. ಆದರೆ ಮಂಗಳೂರಿನಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಲು ಕಾರಣವೇನು?. ಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ? ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ರಾಜ್ಯಸರ್ಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು?ಎಂದು ಪ್ರಶ್ನಿಸಿದ್ದಾರೆ.

ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತ ಇಲ್ಲ. ಆದರೆ ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರ್ಕಾರ ಮತ್ತು ಪೊಲೀಸರು ಪಿತೂರಿ ನಡೆಸಿದರೆ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video