ಸಂಗ್ರಹ ಚಿತ್ರ 
ರಾಜ್ಯ

ಜನವರಿ 2ರಿಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಜನವರಿ ೨ ರಂದು ತುಮಕೂರು ನಗರಕ್ಕೆ ಭೇಟಿ ನೀಡಲಿದ್ದಾರೆ.  ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ ರೈತ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನವರಿ ೨ ರಂದು ತುಮಕೂರು ನಗರಕ್ಕೆ ಭೇಟಿ ನೀಡಲಿದ್ದಾರೆ.  ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ ರೈತ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ನಂತರ ಪ್ರಧಾನಿ ಮೋದಿ ಶ್ರಿ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ  ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ನಮನ ಸಲ್ಲಿಸುವ ಕಾರ್ಯಕ್ರಮವಿದೆ. ಜನವರಿ ೩ ರಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಭಾರತೀಯ ಕೃಷಿ ವಿಜ್ಞಾನ ಕಾಂಗ್ರೆಸ್  ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಜಿಗಣಿಯಲ್ಲಿರುವ ಯೋಗ  ವಿಶ್ವಾವಿದ್ಯಾಲಯ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜನವರಿ ೩ ರಂದು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎರಡು ದಿನಗಳ ಹಿಂದೆ ತುಮಕೂರಿಗೆ ತೆರಳಿ ಪ್ರಧಾನಿ ಕಾರ್ಯಕ್ರಮ ನಡೆಯುವ ಸ್ಥಳಗಳ  ಪರಿಶೀಲನೆ ನಡೆಸಿದರು.  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಜ.೩ರಂದು ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ರೈತರ ಸಮಾವೇಶ ಆಯೋಜಿಸಲಾಗಿದ್ದು, ಕೃಷಿ ಸಮ್ಮಾನ್ ಯೋಜನೆಯ ಎರಡನೇ ಕಂತನ್ನು ತುಮಕೂರಿನಿಂದಲೇ ದೇಶಾದ್ಯಂತ ಚಾಲನೆ ನೀಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದರು. 

ತುಮಕೂರು ಪ್ರಗತಿಪರ ರೈತರ ಜಿಲ್ಲೆಯಾಗಿದ್ದು ಕೃಷಿಕರ ಆದಾಯವನ್ನು ದ್ವಿಗುಣಗೊಳಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದ್ದು, ತುಮಕೂರಿನಲ್ಲಿಯೇ ಕಾರ್ಯಕ್ರಮ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀರ್ಮಾನ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel