ತೀರ್ಥಹಳ್ಳಿ: ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆಸಿದ ಯುವಕನಿಗೆ ಗೂಸಾ 
ರಾಜ್ಯ

ತೀರ್ಥಹಳ್ಳಿ: ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆಸಿದ ಯುವಕನಿಗೆ ಗೂಸಾ

ಯುವಕನೊಬ್ಬ ವಿಕಲಚೇತನ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗಾರ್ಡರಗದ್ದೆಯಲ್ಲಿ ನಡೆದಿದೆ.

ತೀರ್ಥಹಳ್ಳಿ: ಯುವಕನೊಬ್ಬ ವಿಕಲಚೇತನ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗಾರ್ಡರಗದ್ದೆಯಲ್ಲಿ ನಡೆದಿದೆ.

ವಿಕಲಚೇತನ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ತೀರ್ಥಹಳ್ಳಿಯ ಶಿವರಾಜಪುರದಗ್ರಾಮದ  ಸತೀಶ್(38) ಎಂಬಾತನಿಗೆ ಸಾರ್ವಜನಿಕರು ಗೂಸಾ ನೀಡ್ದ್ದು ಪೋಲೀಸರಿಗೆ ಒಪ್ಪಿಸಿದ್ದಾರೆ.

 25 ವರ್ಷದ ವಿಕಲ ಚೇತನ ಯುವತಿಯನ್ನು ಅವಳ ವೀಲ್ ಚೇರ್​ಗೆ ಕಟ್ಟಿ ಹಾಕಿ ಅತ್ಯಾಚಾರಕ್ಕೆ ಸತೀಶ್ ಯತ್ನ ನಡೆಸಿದ್ದ ಆ ವೇಳೆ ಯುವತಿ ಗಟ್ಟಿಯಾಗಿ ಕೂಗಿದ್ದಾಳೆ. ಇದರಿಂದ ನೆರೆಹೊರೆಯವರು, ಗ್ರಾಮಸ್ಥರು ಆಗಮಿಸಿದ್ದು ಸತೀಶ್ ನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಆತನನ್ನು ಪೋಲೀಸರಿಗೆ ಒಪ್ಪಿಸಲಾಗಿದೆ.

ಆರೋಪಿ ಸತೀಶ್ ವಿವಾಹಿತನಾಗಿದ್ದು ಪತ್ನಿಯ ಸಹೋದರನ ಮನೆಗೆ ಆಗಮಿಸಿದ್ದನೆನ್ನಲಾಗಿದೆ. ಆದರೆ ವಿಕಲಚೇತನ ಯುವತಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ನುಗ್ಗಿದ ಸತೀಶ್ ಆಕೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸಧ್ಯ ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?