ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಚಾಕುವಿನಿಂದ ಇರಿದು ಯುವಕನ ಬರ್ಬರ  ಕೊಲೆ

ಯುವಕನೋರ್ವನನ್ನು ನಾಲ್ಕೈದು ಮಂದಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ  ಘಟನೆ ನಗರದ ಶ್ರೀರಾಂಪುರದ ಆರ್ ಜೆ ನಗರದ ಬಸ್ ನಿಲ್ದಾಣದ  ಬಳಿ ನಡೆದಿದೆ. 

ಬೆಂಗಳೂರು: ಯುವಕನೋರ್ವನನ್ನು ನಾಲ್ಕೈದು ಮಂದಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ  ಘಟನೆ ನಗರದ ಶ್ರೀರಾಂಪುರದ ಆರ್ ಜೆ ನಗರದ ಬಸ್ ನಿಲ್ದಾಣದ  ಬಳಿ ನಡೆದಿದೆ.

ದೀಪಾಂಜಲಿ ನಗರದ ನಿವಾಸಿ ಮಂಜುನಾಥ್ (25 ) ಮೃತ ದುರ್ದೈವಿ. ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್,  ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಶ್ರೀರಾಂಪುರಕ್ಕೆ ಬಂದಿದ್ದಾಗ, ದುಷ್ಕರ್ಮಿಗಳು ಆತನ ಹೊಟ್ಟೆಭಾಗಕ್ಕೆ ಚಾಕುವಿನಿಂದ ತಿವಿದಿದ್ದಾರೆ.  ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಹಣಕಾಸಿನ ವಿಚಾರಕ್ಕೆ ಮಂಜುನಾಥ್ ನನ್ನ ಶ್ರೀರಾಂಪುರ ಪ್ರಕಾಶ್ ನಗರದ ಸ್ನೇಹಿತರೇ ಕೊಲೆ ಮಾಡಿರಬಹುದು  ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಮತ್ತು ಶ್ರೀರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. 

ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video