ಸಂಗ್ರಹ ಚಿತ್ರ 
ರಾಜ್ಯ

ಮಿದುಳು ನಿಷ್ಕ್ರಿಯವಾಗಿದ್ದು, ಜೀವರಕ್ಷಕ ವ್ಯವಸ್ಥೆ ಅಳವಡಿಸಲಾಗಿದೆ: ಪೇಜಾವರ ಶ್ರೀಗಳ ಆರೋಗ್ಯದ ಕುರಿತು ವೈದ್ಯರ ಹೇಳಿಕೆ

ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯ ತೀರಾ ಗಂಭೀರ ಸ್ಥಿತಿ ತಲುಪಿದ್ದು, ಮಿದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ಘೋಷಿಸಿದ್ದಾರೆ.

ಉಡುಪಿ: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯ ತೀರಾ ಗಂಭೀರ ಸ್ಥಿತಿ ತಲುಪಿದ್ದು, ಮಿದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ಘೋಷಿಸಿದ್ದಾರೆ.

ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯದ ಕುರಿತಂತೆ ಮಣಿಪಾಲ ಆಸ್ಪತ್ರೆ ವೈದ್ಯಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯ ತೀರಾ ಗಂಭೀರ ಸ್ಥಿತಿ ತಲುಪಿದ್ದು, ಮಿದುಳು ನಿಷ್ಕ್ರಿಯವಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಶ್ರೀಗಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಅವರಿಗೆ ಜೀವರಕ್ಷಕ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನು ಅತ್ತ ವೈದ್ಯರು ಶ್ರೀಗಳ ಆರೋಗ್ಯ ಕುರಿತು ಘೋಷಣೆ ಮಾಡುತ್ತಿದ್ದಂತೆಯೇ ಇತ್ತ ಕೃಷ್ಣ ಮಠದ ಆವರಣದಲ್ಲಿ ನೆರೆದಿದ್ದ ಅವರ ಭಕ್ತರ ಮುಖದಲ್ಲಿ ಆತಂಕ ಹೆಚ್ಚಾಯಿತು. ಶ್ರೀಗಳ ಆರೋಗ್ಯ ಶೀಘ್ರ ಚೇತರಿಸಿಕೊಳ್ಳಲಿ ಎಂದು ಭಕ್ತರು ಶ್ರೀಕೃಷ್ಣನಿಗೆ ಪೂಜೆ ಸಲ್ಲಿಕೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಅತ್ತ ಮಠದಲ್ಲಿಯೂ ಶ್ರೀಗಳ ಆರೋಗ್ಯ ಚೇತರಿಸಿಕೊಳ್ಳಲಿ ಎಂದು ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!