ಪೇಜಾವರ ತೀರ್ಥ ಸ್ವಾಮೀಜಿ 
ರಾಜ್ಯ

ಪೇಜಾವರ ಶ್ರೀ ನಿಧನ: ರಾಜ್ಯಾದ್ಯಂತ 3 ದಿನ ಶೋಕಾಚರಣೆ; ಬೆಂಗಳೂರಿನಲ್ಲಿ ಅಂತ್ಯಕ್ರಿಯೆ

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಮಣಿಪಾಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದರು.

ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆಶಯದಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಬೃಂದಾವನ ನಿರ್ಮಿಸಲಾಗುವುದು. ನಂತರ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಕರೆತರಲಾಗುವುದು, ನಂತರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಮ್ಮ ಮತ್ತು ಸ್ವಾಮೀಜಿ ಒಡನಾಟ ನೆನಪಿಸಿಕೊಂಡು ಭಾವುಕರಾದ ಯಡಿಯೂರಪ್ಪ, ‘ನಾನು ಸ್ವಾಮೀಜಿ ಜೊತೆಗೆ ಕಳೆದ 50 ವರ್ಷಗಳಿಂದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಅವರು ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗೆ ಹೋದಾಗ ಅವರ ಜೊತೆಗೆ ನಾನೂ ಇದ್ದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂಬ ಕನಸು ಅವರದ್ದಾಗಿತ್ತು. ಈಗ ಸುಪ್ರೀಂ ಕೋರ್ಟ್‌ ಸಹ ಅದೇ ತೀರ್ಪು ನೀಡಿದೆ. ಆದರೆ ರಾಮಮಂದಿರ ನೋಡಲು ಅವರಿಗೆ ಆಗಲಿಲ್ಲ’ ಎಂದು ಹೇಳಿದರು.

‘ನಮ್ಮ ದೇಶದ ಇತಿಹಾಸದಲ್ಲಿ ಯಾವುದೇ ಸ್ವಾಮೀಜಿ ಹೀಗೆ ದೇಶದ ಉದ್ದಗಲಕ್ಕೆ ಪ್ರವಾಸ ಮಾಡಿದ್ದು ನಾನು ನೋಡಿಲ್ಲ. ಆಸ್ಪತ್ರೆ ಸೇರುವ ಎರಡು ದಿನ ಹಿಂದೆಯೂ ಪ್ರವಾಸ ಮಾಡಿದ್ದರು. ಇಂಥ ಅಪರೂಪದ ಯತಿವರೇಣ್ಯ ಸಿಗುವುದು ಕಷ್ಟ. ಅಂಥ ಮಹಾನ್ ಪೂಜ್ಯರನ್ನು ಕಳೆದುಕೊಂಡು ದೇಶ ಬಡವಾಗಿದೆ’ ಎಂದು ವಿಷಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT