ರಾಜ್ಯ

ಕೃಷ್ಣೈಕ್ಯರಾದ ವಿಶ್ವೇಶತೀರ್ಥ ಶ್ರೀಗಳು: ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ

Manjula VN

ಉಡುಪಿ: ಹಿರಿಯ ಯತಿಗಳೆನಿಸಿಕೊಂಡಿದ್ದ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳು ಇಂದು ಮುಂಜಾ ಕೃಷ್ಣೈಕ್ಯರಾಗಿದ್ದು, ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. 

ಶ್ರೀಗಳ ಕೊನೆಯಾಸೆಯಂತೆಯೇ ಉಡುಪಿಯ ಪೇಜಾವರ ಮಠದಲ್ಲಿಯೇ ಪರಮಾತ್ಮನಲ್ಲಿ ಲೀನರಾಗಿದ್ದಾರೆ. ಿದೀಗ ಶ್ರೀಗಳ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಲು ಆರಂಭಗೊಂಡಿದ್ದು, ಮಧ್ಯಾಹ್ನ 12ಗಂಟೆಯವರೆಗೂ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಬಳಿಕ ಪಾರ್ಥೀವ ಶರೀರವನ್ನು ಏರ್ ಲಿಪ್ಟ್ ಮೂಲಕ ಹೆಚ್ಎಎಲ್'ಗೆ ಕರೆತಂದು ಬಳಿಕ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಂಜೆ 4 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ಸಿದ್ಧತೆಗಳನ್ನು ಮಾಡಲಾಗುತ್ತದೆ. 

ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯಾತಿಗಣ್ಯರು ಆಗಮಿಸುವ ಸಾಧ್ಯತೆಗಳಿದ್ದು, ಬಿಗಿ ಭದ್ರತೆಯನ್ನು ನಿಯೋಜಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 

ಅಂತಿಮ ದರ್ಶನ ಮುಗಿದ ಬಳಿಕ ವಿಧಿವಿಧಾನಗಳನ್ನು ನೆರವೇರಿಸಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಇದಕ್ಕಾಗಿ ವಿದ್ಯಾಪೀಠದ ಕೃಷ್ಣಮಂದಿರ ಎಡಭಾಗದಲ್ಲಿ ವೃಂದಾವನಕ್ಕೆ ವ್ಯವಸ್ಥೆ ಮಾಡಲಾಗಿದೆ ಬಲಭಾಗದಲ್ಲಿ ಸರ್ಕಾರಿ ಗೌರವ ನೀಡಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಪ್ರಸ್ತುತ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ

SCROLL FOR NEXT