ರಾಜ್ಯ

ಉದ್ಭವ್ ಠಾಕ್ರೆ ಮುಖ್ಯಮಂತ್ರಿ ಆದ ಬಳಿಕವೇ ಗಡಿವಿವಾದ ಹುಟ್ಟಿದೆ: ಶ್ರೀರಾಮುಲು

Shilpa D

ಬೆಂಗಳೂರು: ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಕೊಲ್ಲಾಪುರದಲ್ಲಿ ಶಿವಸೇನೆ ಅಭಿಮಾನಿಗಳಿಂದ ಪುಂಡಾಟ ವಿಚಾರವಾಗಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಶ್ರೀರಾಮುಲು, ಉದ್ಭವ್ ಠಾಕ್ರೆ ಮುಖ್ಯಮಂತ್ರಿ ಆದ ಬಳಿಕ ಇಂತಹದ್ದೆಲ್ಲ ನಡೆಯುತ್ತಿದೆ‌. ಬಿಜೆಪಿಯ ಧ್ವಜಕ್ಕೆ ಬೆಂಕಿ ಹಚ್ಚಿ ಉದ್ಧಟತನ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಲ, ಜಲ, ಭಾಷೆ ವಿಚಾರದಲ್ಲಿ ಒಗ್ಗಟ್ಟಾಗುತ್ತೇವೆ. ಕರ್ನಾಟಕ ಸರ್ಕಾರ ಕೂಡ ಇದೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಈಗಾಗಲೇ ಹೋರಾಟ ನಿರಂತರವಾಗಿ ನಡೆದಿದೆ. ನಾವು ಒಗ್ಗಟ್ಟಾಗಿ ನೆಲ ಜಲದ ಬಗ್ಗೆ ಹೋರಾಡುತ್ತೇವೆ ಎಂದರು.

ದೇವೇಂದ್ರ ಫಡ್ನವಿಸ್ ಬೆಂಬಲದ ಬಗ್ಗೆಯೂ ನಾವು ಗಮನಿಸುತ್ತೇವೆ. ಕೇಂದ್ರದ ನಾಯಕರು ಈ ಬಗ್ಗೆ ಕಣ್ಣಿಟ್ಟಿದ್ದಾರೆ ಎಂದರು.

ಶಿವಸೇನೆಯವರು ಬೇಕಾದರೆ ಕಾನೂನು ಹೋರಾಟ ಮಾಡಲಿ, ನಾವು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದ ಅವರು ಇದರ ಬದಲಾಗಿ ಕೊಲ್ಲಾಪುರದಲ್ಲಿ ಸಿಎಂ ಬಿಎಸ್‌ವೈ ಪ್ರತಿಕೃತಿ ದಹನ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

SCROLL FOR NEXT