ಸಾಂದರ್ಭಿಕ ಚಿತ್ರ 
ರಾಜ್ಯ

ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ನೀಡುವ ಬಗ್ಗೆ ಪರಿಶೀಲನೆ: ಸಚಿವ ನಾಗೇಶ್

ಮದ್ಯದ ದರದಲ್ಲಿ ಗಣನೀಯ ಏರಿಕೆಯಾಗಿ ಬಡ ಜನರಿಗೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅಬಕಾರಿ ಸಚಿವ ಎಚ್ ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರು: ಮದ್ಯದ ದರದಲ್ಲಿ ಗಣನೀಯ ಏರಿಕೆಯಾಗಿ ಬಡ ಜನರಿಗೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅಬಕಾರಿ ಸಚಿವ ಎಚ್ ನಾಗೇಶ್ ತಿಳಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮದ್ಯ ಸರಬರಾಜು ಮಾಡುವ ಚಿಂತನೆ ಇದೆ. ಕಡಿಮೆದರದ ಮದ್ಯ ನೀಡುವಂತಿದ್ದರೆ ಗುಣಮಟ್ಟಕೆ ಆದ್ಯತೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಬಡವರಿಗೆ ಕಡಿಮೆ ದರದಲ್ಲಿ ಮದ್ಯ ನೀಡುವ ಬಗ್ಗೆ ಪ್ರಸ್ತಾಪವಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ನೀಡುವ ಬಗ್ಗೆ ಹಣಕಾಸು ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಈಗಾಗಲೇ 765  ಎಂಎಸ್ ಐಎಲ್ ಮದ್ಯ ಮಾರಾಟ ಮಳಿಗೆಗೆ ಅನುಮತಿ ನೀಡಲಾಗಿದೆ. ಈ ಪೈಕಿ 408 ಮಳಿಗೆಗಳು ಇನ್ನೂ ಪ್ರಾರಂಭವಾಗಿಲ್ಲ. ಒಂದು ಕ್ಷೇತ್ರದಲ್ಲಿ ನಾಲ್ಕು ಮಳಿಗೆಗಳನ್ನು ತೆರೆಯುವ ನಿಯಮ ಇದೆ. ಈ ಬಗ್ಗೆ ಸ್ಥಳೀಯ ಶಾಸಕರು ನಿರ್ಧರಿಸುತ್ತಾರೆ. ಇವುಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಪ್ರಾರಂಭಿಸುವ ಬಗ್ಗೆ ಚಿಂತನೆ ಇದೆ ಎಂದು ವಿವರಿಸಿದರು.

ಬಿಯರ್ ಮಾರಾಟವನ್ನು ಕಡಿಮೆ ಮಾಡಿ ಇತರೆ ಮದ್ಯವನ್ನು ಹೆಚ್ಚು ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳು ಮದ್ಯ ಮಾರಾಟಗಾರರ ಮೇಲೆ ಒತ್ತಡ ಹೇರುತ್ತಿರುವ ದೂರುಗಳು ಬಂದಿವೆ. ಈ ಬಗ್ಗೆ ಅಬಕಾರಿ ಆಯುಕ್ತರೊಂದಿಗೆ ಚರ್ಚಿಸಿದ್ದು, ಕರಾವಳಿ ಭಾಗದಲ್ಲಿ ಬಿಯರ್ ಮಾರಾಟ ನಿಯಂತ್ರಿಸದಂತೆ ಸೂಚನೆ ನೀಡಲಾಗಿದೆ ಎಂದರು.
 
ಸರ್ಕಾರ ರಾಜಸ್ವ ಸಂಗ್ರಹಣೆಗಾಗಿ ನಮಗೆ ಗುರಿ ನಿಗದಿ ಮಾಡಿದ್ದು,  20,950 ಕೋಟಿ ರೂ.  ರಾಜಸ್ವ ಸಂಗ್ರಹಣೆ ಗುರಿ ಇದೆ. ನವೆಂಬರ್ ವರೆಗೆ ಒಟ್ಟು 14,400 ಕೋಟಿ ರೂ‌. ಆದಾಯ ಸಂಗ್ರಹಿಸಿದ್ದು, ಡಿಸೆಂಬರ್  ತಿಂಗಳಾಂತ್ಯಕ್ಕೆ ಮತ್ತೆ 1700 ಕೋಟಿ ರೂ. ಕ್ರೋಢೀಕರಣವಾಗುವ ನಿರೀಕ್ಷೆಯಿದೆ. ಒಟ್ಟು ಇಲ್ಲಿವರೆಗೆ 16,100 ಕೋಟಿ ರೂ. ರಾಜಸ್ವ ಸಂಗ್ರಹವಾಗುವ ನಿರೀಕ್ಷೆಯಿದೆ. ಇನ್ನು ಮೂರು ತಿಂಗಳೊಳಗೆ ನಿಗದಿ ಮಾಡಿರುವ ಗುರಿ ಮುಟ್ಟುತ್ತೇವೆ ಎಂದು ತಿಳಿಸಿದರು.

ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿ 2 ಗಂಟೆಯವರಗೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ವೈನ್ ಶಾಪ್ ಗಳು ರಾತ್ರಿ 11 ಗಂಟೆ ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ ಗಳು ಮಧ್ಯರಾತ್ರಿ 1 ಗಂಟೆಯವರೆಗೆ ತೆರೆದಿರುತ್ತವೆ. ಇದನ್ನು ಇನ್ನೂ ಒಂದು ಗಂಟೆ ಹೆಚ್ಚಿಸಿ ಮಧ್ಯರಾತ್ರಿ 2 ಗಂಟೆವರಗೆ ಅವಕಾಶ ಕೊಡಲು ಗೃಹ ಇಲಾಖೆಯೂ ಸಮ್ಮತಿಸಿದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

Open The F*cking Strait, You Bast*rds: ಹತಾಶ ಅಮೆರಿಕ ಅಧ್ಯಕ್ಷರಿಂದ ಇರಾನ್ ಗೆ ಅಶ್ಲೀಲ ನಿಂದನೆ, ಬೈಗುಳ

ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ: ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಹಿಂದೂ ಯುವತಿಯ ಹಲವು ವಿಡಿಯೋ ವೈರಲ್

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

SCROLL FOR NEXT