ರಾಜ್ಯ

ನಗರದಲ್ಲಿ ತಲೆಎತ್ತಿದ ಅಕ್ರಮ ಶಸ್ತ್ರಾಸ್ತ್ರ ಮಾರಾಟ: ರಾಷ್ಟ್ರಮಟ್ಟದ ಕ್ರೀಡಾಪಟು ಸೇರಿ 6 ಮಂದಿ ಬಂಧನ

Manjula VN

ಬೆಂಗಳೂರು: 4 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮತ್ತೆ ಅಕ್ರಮ ಶಸ್ತ್ರಾಸ್ತ್ರ ಮಾರಾಟ ದಂಧೆ ಆರಂಭಿಸಲು ಸಜ್ಜಾಗಿದ್ದ ಕುಖ್ತಾತ ಪಾತಕಿ ಮೃತ ಬ್ರಿಗೇಡ್ ಅಜಂನ ಶಿಷ್ಯರು ಸಿಸಿಬಿ ಬಲೆಗೆ ಬಿದ್ದಿದ್ದಾರೆ. 

ಹಾವೇರಿ ಜಿಲ್ಲೆ ಅಸ್ಲಾಂ ಗುತ್ತಲ್ ಅಲಿಯಾಸ್ ಅಸ್ಲಾಂ, ಮೈಸೂರಿನ ಜಾವೀದ್ ಖಾನ್ ಅಲಿಯಾಸ್ ಜಾವೀದ್, ಧರ್ಮಣ್ಣ ದೇವಲಪ್ಪ ಚೌವ್ಹಾಣ್, ಧಾರವಾಡದ ರಾಯಣ್ಣಗೌಡ, ಬಿಸ್ಮಿಲ್ಲಾ ನಗರದ ಸೈಯಲ್ ರಿಜ್ವಾನ್ ಅಲಿಯಾರ್ ಅಲ್ಲಾವುದ್ದೀನ್ ಹಾಗೂ ಪಶ್ಚಿಮ ಬಂಗಾಳ ಮೂಲದ ರೋಹನ್ ಮಂಡನ್ ಬಂಧಿತರು. 

ಆರೋಪಿಗಳಿಂದ ಮೂರು ಪಿಸ್ತೂಲ್, ಒಂದು ರಿವಾಲ್ವಾರ್ ಹಾಗೂ ಎಂಟು ಜೀವಂತ ಗುಂಡುಗಳನ್ನು ಜಪ್ತಿ ಮಾಡಲಾಗಿದೆ. ತಮ್ಮ ಗುರು ಬ್ರಿಗೇಡ್ ಅಜಂ ಮೃತನಾದ ಬಳಿಕ ನಗರ ತೊರೆದಿದ್ದ ಆರೋಪಿಗಳು, ಮತ್ತೆ ಬೆಂಗಳೂರಿನಲ್ಲಿ ಚಟುವಟಿಕೆ ಪ್ರಾರಂಭಿಸಲು ಸಿದ್ಧತೆ ನಡೆಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಕಾಟನ್ ಪೇಟೆಯ ಬಿನ್ನಿಮಿಲ್ ಮೈದಾನದ ಸಮೀಪ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಯಿತು ಎಂದು ಅಧಿಕಾರಿಘಳು ತಿಳಿಸಿದ್ದಾರೆ. 

ಬಂಧನಕ್ಕೊಳಗಾಗಿರುವ ಅಸ್ಲಾಂ ಹಾವೇರಿ ಜಿಲ್ಲೆ ಮೂಲದವನಾಗಿದ್ದು, ರಾಷ್ಟ್ರೀಯ ಮಟ್ಟದ ಬಾಸ್ಕೆಟ್ ಬಾಲ್ ಆಟಗಾರನಾಗಿದ್ದ. ಎರಡ್ಮೂರು ಬಾರಿ ರಾಷ್ಟ್ರವನ್ನು ಸಹ ಆತ ಪ್ರತಿನಿಧಿಸಿ ಆಟವಾಡಿದ್ದ. ಅಷ್ಟರದಲ್ಲಿ ಹಣದಾಸೆಗೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಅಸ್ಲಾಂ, ನಿಧಾನವಾಗಿ ಪಾತಕಲೋಕದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪೂರೈಕೆಗೆ ಕುಖ್ಯಾತಿ ಗಳಿಸಿದ್ದ. ತರುವಾಯ ಆತನಿಗೆ ಶಿವಾಜಿನಗರದ ಬ್ರಿಗೇಡ್ ಅಜಂ ಪರಿಚಯವಾಯಿತು. ಅಲ್ಲಿಂದ ಅಜಂ ತಂಡದಲ್ಲಿ ಗುರುತಿಸಿಕೊಂಡು ಅಪರಾಧ ಕೃತ್ಯಗಳನ್ನು ಮುಂದುವರೆಸಿದ್ದ. 

SCROLL FOR NEXT