ರಾಜ್ಯ

ಕನಕಪುರ ಏಸು ಪ್ರತಿಮೆ ವಿವಾದ: ರಾತ್ರೋರಾತ್ರಿ ತಹಶೀಲ್ದಾರ್ ವರ್ಗಾವಣೆ

Manjula VN

ರಾಮನಗರ: ಕನಕಪುರದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿವಾದಕ್ಕೆ ಸಂಬಂಧಿಸಿದಂತೆ ತಹಶೀಲ್ದಾನ್ ಆನಂದಯ್ಯ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಕಶಿಲಾ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಶಿವಕುಮಾರ್ ಡಿ.25ರ ಕ್ರಿಸ್ ಮಸ್ ದಿನ ಶಂಕುಸ್ಥಾಪನೆ ಮಾಡಿದ್ದರು. ಅಲ್ಲದೆ. ಹಿಂದಿನ ಸರ್ಕಾರದಲ್ಲಿ ಸರ್ಕಾರದಿಂದ ಮಂಜೂರು ಮಾಡಲಾಗಿದ್ದ 10 ಎಕರೆ ಜಾಗಕ್ಕೆ ಡಿಕೆಶಿ ಅವರೇ ಹಣ ಪಾವತಿಸಿದ್ದರು. 

ಈ ಬಗ್ಗೆ ಬಿಜೆಪಿ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಇಟಲಿಯಮ್ಮನ ಮೆಚ್ಚಿಸುವ ಸಲುವಾಗಿ ಶಿವಕುಮಾರ್ ಏಸುಕಿಸ್ತನ ಪ್ರತಿಮೆ ನಿರ್ಮಾಣ ಮಾಡಲು ಹೊರಟಿದ್ದಾರೆಂದು ಹೇಳಿದ್ದರು. ವಿವಾದ ಭುಗಿಲೇಳುತ್ತಿದ್ದಂತೆಯೇ ಇದೀಗ ಕನಕಪುರ ತಹಶೀಲ್ದಾರ್ ಆನಂದಯ್ಯ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸ್ಥಾನಕ್ಕೆ ವರ್ಷಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಪ್ರಸ್ತುತ ನೇಮಕಗೊಂಡಿರುವ ವರ್ಷಾ ಅವರು ಈ ಮೊದಲು ಯಳಂದೂರು ತಹಶೀಲ್ದಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 

ಕನಕಪುರ ತಹಶೀಲ್ದಾನ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆರ್.ಉಮಾದೇವಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಂಡಿರುವ ಆನಂದಯ್ಯ ಅವರಿಗೆ ಬೇರಾವುದೇ ಪ್ರದೇಶವನ್ನು ತೋರಿಸಲಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ. 

SCROLL FOR NEXT