ರಾಜ್ಯ

ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷ ಹರಡುತ್ತಿದ್ದ ವ್ಯಕ್ತಿ ಬಂಧನ

Nagaraja AB

ಮಂಗಳೂರು: ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷದ ಪ್ರಚೋದನಾತ್ಮಕ ಸಂದೇಶಗಳನ್ನು ಹರಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬನ್ನು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. 

ಬಂಧಿತ ವ್ಯಕ್ತಿಯನ್ನು ನಗರದ ಪಾಂಡೇಶ್ವರದ ಮೊಯಿದೀನ್ ಅಹಮದ್ ಎಂದು ಗುರುತಿಸಲಾಗಿದೆ. ಡಿ 19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳ ವೇಳೆ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿ ಪ್ರಚೋದನಾತ್ಮಕ ಸಂದೇಶಗಳನ್ನು ಕಳುಹಿಸುತ್ತಿದ್ದ  ವ್ಯಕ್ತಿಯನ್ನು ಬಂಧಿಸಲಾಗಿದೆ . 

ಅಹಮದ್  ಬಂಧನ ಕುರಿತು ಮತ್ತು ಪ್ರಚೋನಾತ್ಮಕ ಸಂದೇಶಗಳನ್ನು ಫಾವರ್ಡ್ ಮಾಡುತ್ತಿದ್ದ ಅನೇಕ ವ್ಯಕ್ತಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. 

ಈ ಕುರಿತಂತೆ ನಗರದ ಸೈಬರ್ ಅಪರಾಧ ತಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯುತ್ತಮವೆನಿಸಿದ ಸೈಬರ್ ತಜ್ಞರು ಸಾಮಾಜಿಕ ಮಾಧ್ಯಮ ಗ್ರೂಪ್ ಗಳ ಮೇಲ್ವಿಚಾರಣೆ ನಡೆಸುತ್ತಿದ್ದು, ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಶಾಂತಿ ಮತ್ತು ಸಾಮರಸ್ಯ ಕದಡಲು ಯಾರೊಬ್ಬರು ಪ್ರಯತ್ನಿಸಿದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಡಾ. ಪಿ.ಎಸ್.ಹರ್ಷ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಕೋಮುದ್ವೇಷ ಹಬ್ಬುತ್ತಿದ್ದ ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.  

ಪ್ರಚೋದನಾತ್ಮಕ ಸಂದೇಶಗಳನ್ನು ಫಾರ್ವರ್ಡ್ ಮಾಡುತ್ತಿದ್ದ ಫೇಸ್‍ಬುಕ್ ಅಡ್ಮಿನ್ ಸೇರಿದಂತೆ ಆರು ಜನರಿಗೆ ಸೈಬರ್ ಅಪರಾಧ ನಿಗ್ರಹ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

SCROLL FOR NEXT