ಬೆಂಗಳೂರು: ಆಕಸ್ಮಿಕವಾಗಿ ಬಾತ್ ರೂಂ ನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಜಾರಿ ಬಿದ್ದ ಪರಿಣಾಮ ಅವರ ಬಲಗಾಲಿಗೆ ಪೆಟ್ಟಾಗಿದೆ.
ಪದ್ಮನಾಭನಗರದಲ್ಲಿರುವ ಅವರ ನಿವಾಸದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಅವರ ಬಲಗಾಲಿನ ಗಾಯವಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸದ್ಯ ದೇವೇಗೌಡರನ್ನು ಪರೀಕ್ಷಿಸಿರುವ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಜೊತೆಗೆ ಎಂ ಆರ್ ಐ ಸ್ಕ್ಯಾನ್ ಮಾಡಿಸುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.