ರಾಜ್ಯ

ಭೂಗತ ಪಾತಕಿ ರವಿ ಪೂಜಾರಿ ಬಂಧನದಲ್ಲಿ ಸಮ್ಮಿಶ್ರ ಸರ್ಕಾರದ ಪಾತ್ರ ಮಹತ್ವದ್ದು: ಕುಮಾರಸ್ವಾಮಿ

Shilpa D
ಬೆಂಗಳೂರು: ಸೆನೆಗಲ್ ನಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನದಲ್ಲಿ ಸಮ್ಮಿಶ್ರ ಸರ್ಕಾರದ ಪಾತ್ರ ಮಹತ್ವದ್ದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. 
ಸರ್ಕಾರ ರಚನೆ ಆದ ಆರಂಭದಲ್ಲೇ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಆದರಲ್ಲಿ ರಾಜ್ಯ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಹಾಗೂ ಭಾರತದ ವಿದೇಶಾಂಗ ಇಲಾಖೆ ಪ್ರತಿನಿಧಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಇದು ನಮ್ಮ ಯಶಸ್ಸು ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ದೂರವಾಣಿ ಮೂಲಕ ಉದ್ಯಮಿಗಳಿಗೆ ಹಾಗೂ ಗಣ್ಯರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿ ಭಯದ ವಾತಾವರಣ ನಿರ್ಮಾಣ ಮಾಡಿದ್ದ. ಇದರಲ್ಲಿ 2006 ರಿಂದಲೇ ನಮಗೇ ಕೃತ್ಯ ಎಸಗುವ ಬಗ್ಗೆ ಮಾಹಿತಿ ಲಭಿಸಿತ್ತು. ಆದ್ದರಿಂದ ಸರ್ಕಾರ ರಚನೆಯಾದ ಕೂಡಲೇ ಪೊಲೀಸರಿಗೆ ಕ್ರಮಕೈಗೊಳ್ಳಲು ಸೂಚಿಸಿದೆ.
ಇದರಲ್ಲಿ ಕೇಂದ್ರದ ಸಹಕಾರ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕಲಾಯಿತು. ಫೋನ್ ಕರೆ ಮಾಹಿತಿ ಮೇರೆಗೆ ಆತ ಸೆನೆಗಲ್ ನಲ್ಲಿದ್ದಾನೆ ಎಂಬ ಮಾಹಿತಿ ಲಭಿಸಿತ್ತು. ಆ ಬಳಿಕ ಅಲ್ಲಿನ ಸರ್ಕಾರದೊಂದಿಗೆ ಉತ್ತಮ ಸಂಪರ್ಕ ಏರ್ಪಡಿಸಿ ಆತನ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ರವಿ ಪೂಜಾರಿ ಬಂಧನ ವಿಚಾರದಲ್ಲಿ ಯಾವುದೇ ತಪ್ಪು ಮಾಹಿತಿ ಹೋಗುವುದು ಬೇಡ. ಆತ ಸೆನೆಗಲ್ ನಲ್ಲಿ ಡಿಸೆಂಬರ್ 31 ರಂದು ಕ್ರಿಕೆಟ್ ಪಂದ್ಯಗಳನ್ನ ಏರ್ಪಡಿಸುವ ಬಗ್ಗೆ ಫೋಟೋ ಹಾಗೂ ಮಾಹಿತಿ ಲಭಿಸಿತ್ತು. ಇದರ ಆದರ ಮೇಲೆ ನಮ್ಮಲಿನ ಮಾಹಿತಿ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದೇವು. ಆ ಬಳಿಕ ಜನವರಿ 19 ರಂದೇ ರವಿ ಪೂಜಾರಿಯ ಬಂಧನವಾಗಿದೆ. ಅಲ್ಲದೇ ಆತನನ್ನು ಭಾರತ ವಶಕ್ಕೆ ನೀಡಲು ಬೇಕಾದ ಕಾನೂನು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.
ರವಿ ಪೂಜಾರಿ ಬಂಧನದಲ್ಲಿ ನಮ್ಮ ಪೊಲೀಸರ ಸಾಧನೆ ಮೆಚ್ಚುವಂತಹದ್ದು, ಅಲ್ಲದ ಅಲ್ಲಿನ ವಿದೇಶಾಂಗ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ. 
SCROLL FOR NEXT