ಉಡುಪಿ: ಸಬ್ ಜೈಲಿನಲ್ಲೇ ವಿಚಾರಣಾಧೀನ ಖೈದಿ ಆತ್ಮಹತ್ಯೆ!
ಉಡುಪಿ: ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿರುವ ಸಬ್ ಜೈಲಿನಲ್ಲಿ ವಿಚಾರಣಾಧೀನ ಖೈದಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಹಿರಿಯಡ್ಕ, ಅಂಜಾರು ಗ್ರಾಮದಲ್ಲಿನ ಜೈಲಿನಲ್ಲಿ ಕಿದಿಯೂರು ಗ್ರಾಮ ನಿವಾಸಿಯಾಗಿದ್ದ ಅಮರ್ ನಾಥ್ (32) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅತ್ಯಾಚಾರ, ಜಾತಿ ನಿಂದನೆ ಆರೋಪದಡಿ ಉಡುಪಿ ಮಹಿಳಾ ಠಾಣೆಯಲ್ಲಿ ಈತನ ವಿರುದ್ಧ ದೂರು ದಾಖಲಾಗಿತ್ತು.ಈತ ಕೆಲ ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಎಂದು ಪೋಲೀಸರು ತಿಳಿಸಿದ್ದಾರೆ.
ಜೈಲಿನಲ್ಲಿರುವ ವೀಡಿಯೋ ಕಾನ್ಫರೆನ್ಸ್ ಹಾಲ್ ನ ಫ್ಯಾನ್ ಗೆ ನೇಣು ಬಿಗಿದುಕೊಂಡು ಅಮರ್ ನಾಥ್ ಆತ್ಮಹತ್ಯೆ ಮಾಡಿಕೊಂಡದ್ದಾಗಿ ಪೋಲೀಸರು ಹೇಳಿದ್ದಾರೆ.
ಘಟನೆ ಕುರಿತಂತೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.