ರಾಜ್ಯ

ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಮಹಿಳೆ ಯತ್ನ!

Shilpa D
ಬೆಂಗಳೂರು: ಇನ್ ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಕಚೇರಿಯಲ್ಲಿ 28 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಆಕೆ ಅಪಾಯದಿಂದ ಪಾರಾಗಿದ್ದಾಳೆ, ಮಹಿಳೆಯು ಕಳೆದ 10 ತಿಂಗಳಿಂದ ಖಾಸಗಿ ಸಂಸ್ಥೆಯ ಉದ್ಯೋಗಿಯೊಂದಿಗೆ ಸಂಬಂಧವಿಟ್ಟುಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಮೊದಲಿಗೆ ಮದುವೆಯಾಗುವುದಾಗಿ ಭರವಸೆ ನೀಡಿದ್ದ ಆತ  ನಂತರ ಮದುವೆಯಾಗಲು ನಿರಾಕರಿಸಿದ,  ಆಕೆ ನಂತರ ಮಹಿಳಾ ಸಹಾಯವಾಣಿ ಸಹಾಯ ಪಡೆದಳು, ನಂತರ ಇಬ್ಬರಿಗೂ ಸಲಹೆ ನೀಡಲಾಯಿತು. ವಿಧಾನಸೌಧ ಪೊಲೀಸರು ಮಹಿಳೆಯ ವಿರುದ್ಧ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.
SCROLL FOR NEXT