ಸಂಗ್ರಹ ಚಿತ್ರ 
ರಾಜ್ಯ

ವಿಡಿಯೋ ವೈರಲ್: ಪೊಲೀಸರಿಗೆ ಆವಾಜ್ ಹಾಕುತ್ತಿದ್ದ ಪುಂಡನಿಗೆ ಡಿಚ್ಚಿ ಹೊಡೆದ ಪಿಎಸ್ಐ!

ಶಿವಾಜಿನಗರದ ಕಮರ್ಷಿಯಲ್ ಸ್ಟ್ರೀಟ್ ನ ಗ್ಲುಷನ್ ಸಾಧೀ ಮಾಲ್ ಕಮಿಟಿಗೆ ನಡೆಯುತ್ತಿದ್ದ ಚುನಾವಣೆ ವೇಳೆ ಗಲಾಟೆ ನಡೆದಿದ್ದು ಪೊಲೀಸರಿಗೆ ಆವಾಜ್ ಹಾಕುತ್ತಿದ್ದ ಪುಂಡನಿಗೆ ಪಿಎಸ್ಐ ಡಿಚ್ಚಿ ಹೊಡೆದು ಬೆದರಿಸಿದ ಘಟನೆ ನಡೆದಿದೆ.

ಬೆಂಗಳೂರು: ಶಿವಾಜಿನಗರದ ಕಮರ್ಷಿಯಲ್ ಸ್ಟ್ರೀಟ್ ನ ಗ್ಲುಷನ್ ಸಾಧೀ ಮಾಲ್ ಕಮಿಟಿಗೆ ನಡೆಯುತ್ತಿದ್ದ ಚುನಾವಣೆ ವೇಳೆ ಗಲಾಟೆ ನಡೆದಿದ್ದು ಪೊಲೀಸರಿಗೆ ಆವಾಜ್ ಹಾಕುತ್ತಿದ್ದ ಪುಂಡನಿಗೆ ಪಿಎಸ್ಐ ಡಿಚ್ಚಿ ಹೊಡೆದು ಬೆದರಿಸಿದ ಘಟನೆ ನಡೆದಿದೆ.
ಚುನಾವಣೆ ಮುಗಿದ ಬಳಿಕ ಅಲ್ಲಿ ನೆರೆದಿದ್ದ ಸಾರ್ವಜನಿಕರನ್ನು ಅಲ್ಲಿಂದ ತೆರಳುವಂತೆ ಪೊಲೀಸರು ಸೂಚಿಸಿದ್ದರು. ಈ ವೇಳೆ ಪುಂಡನೊಬ್ಬ ನಮ್ಮನ್ನು ಹೋಗೋ ಅನ್ನೋಕೆ ನೀನ್ಯಾರು ಎಂದು ಪೊಲೀಸ್ ಇನ್ಸ್ ಪೆಕ್ಟರ್ ಜೊತೆ ವಾಗ್ವಾದಕ್ಕಿಳಿದಿದ್ದಾನೆ. ಈ ವೇಳೆ ಅಲ್ಲಿಗೆ ಬಂದ ಪಿಎಸ್ಐ ಕಿರಣ್ ಇನ್ಸ್ ಪೆಕ್ಟರ್ ಗೆ ಅವಾಜ್ ಹಾಕುತ್ತಿದ್ದ ಪುಂಡನಿಗೆ ಡಿಚ್ಚಿ ಹೊಡೆದು ಬೆದರಿಸಿದ್ದಾನೆ. 
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತದೆ ಎಂದು ಭಾವಿಸಿದ ಕೆಲ ಪೊಲೀಸರು ಮತ್ತು ಮುಸ್ಲಿಂ ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ; ಪುತ್ತೂರಿನಲ್ಲಿ ಆಗಿದ್ದೇನು?

'ಶೋಲೆ' ಖ್ಯಾತಿಯ ಬಾಲಿವುಡ್ ನಟ ಗೋವರ್ಧನ್ ಅಸ್ರಾನಿ ವಿಧಿವಶ

Israel ಸೈನಿಕರ ಹತ್ಯೆಯ ನಂತರ ಮುರಿದುಬಿದ್ದ ಕದನ ವಿರಾಮ: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿಯಲ್ಲಿ 45 ಮಂದಿ ಸಾವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತವಾಗಿ ಮಾಜಿ ಅಧ್ಯಕ್ಷ ಸಾವು

10,000 ಅಡಿ ದಿಢೀರ್ ಕುಸಿದ 737 ಬೋಯಿಂಗ್ ವಿಮಾನ; ಮಾರ್ಗ ಮಧ್ಯೆ ವಿಂಡ್ ಶೀಲ್ಡ್ ಗೆ ಹಾನಿ; ಪೈಲೆಟ್, ಪ್ರಯಾಣಿಕರು ಬದುಕಿದ್ದೇ ಪವಾಡ!

SCROLL FOR NEXT