ಮೈಸೂರಲ್ಲೊಂದು ಲವ್-ಸೆಕ್ಸ್-ದೋಖಾ, ಯುವತಿ ಆತ್ಮಹತ್ಯೆ! 
ರಾಜ್ಯ

ಮೈಸೂರಲ್ಲೊಂದು ಲವ್-ಸೆಕ್ಸ್-ದೋಖಾ, ಯುವತಿ ಆತ್ಮಹತ್ಯೆ!

ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕು ಕಟ್ಟೆಮಳಲವಾಡಿ ಗ್ರಾಮದಲ್ಲಿ ನಡೆದಿದೆ.

ಮೈಸೂರು: ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕು ಕಟ್ಟೆಮಳಲವಾಡಿ ಗ್ರಾಮದಲ್ಲಿ ನಡೆದಿದೆ.  ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾಳೆ.
ಘಟನೆ ವಿವರ
ಅರ್ಪಿತಾ (19) ತಾನು ಲೋಕೇಶ್ ಗೌಡ(26)  ಎಂಬಾತನನ್ನು ಪ್ರೀತಿಸುತ್ತಿದ್ದಳು. ಒಂದು ವರ್ಷದಿಂದ ಇಬ್ಬರೂ ಪ್ರೇಮಪಾಶದಲ್ಲಿ ಸಿಕ್ಕಿದ್ದರು.ತಾನು ಅರ್ಪಿತಾಳನ್ನೇ ವಿವಾಹವಾಗುವುದಾಗಿ ನಂಬಿಸಿದ್ದ ಗೌಡ ಆಕೆಯೊಡನೆ ದೈಹಿಕ ಸಂಪರ್ಕ ಸಹ ಮಾಡಿದ್ದ.  ಯುವತಿ ಅರ್ಪಿತಾ ಸಹ ತನ್ನ ಪ್ರೇಮಿಯನ್ನು ಬಹಳವೇ ನಂಬಿದ್ದು ಅದಕ್ಕೆ ಒಪ್ಪಿಗೆ ಸೂಚಿಸಿದ್ದಳು. ಆದರೆ ಇದಾಗಿ ಕೆಲ ದಿನಗಳ ಹಿಂದೆ ಮನೆಯಲ್ಲಿ ನಮ್ಮ ವಿವಾಹಕ್ಕೆ ಒಪ್ಪುತ್ತಿಲ್ಲ ಎಂದು ಕುಂಟು ನೆಪ ಹೇಳಿದ ಗೌಡ ಅರ್ಪಿತಾಳಿಂದ ದೂರಾಗಿದ್ದಾನೆ.
ಆದರೆ ತಾನು ಪ್ರೀತಿಸಿದ ಯುವಕ ಸದಾ ನನ್ನಒಡನಿರುತ್ತಾನೆ ಎಂದೇ ನಂಬಿದ್ದ ಅರ್ಪಿತಾಗೆ ಇದರಿಂದ ಆಘಾತವಾಗಿದೆ. ಆಕೆ ಆತ್ಮಹತ್ಯೆಗೆ ನಿರ್ಧರಿಸಿದ್ದು "ನನ್ನನ್ನು ವಂಚಿಸಿದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ" ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾಳೆ.
ಸಧ್ಯ ವಂಚಕ ಪ್ರೇಮಿ ಲೋಕೇಶ್ ಗೌಡ ಪರಾರಿಯಾಗಿದ್ದಾನೆ. ಹುಣಸೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈನ ವಸತಿ ಕಟ್ಟಡದಲ್ಲಿ ಎರಡು ಸುತ್ತು ಗುಂಡು ಹಾರಿಸಿದ ನಟ ಕಮಲ್ ಖಾನ್ ಬಂಧನ!

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ: ಜನಾರ್ಧನ ರೆಡ್ಡಿ ‘ಮಾಡೆಲ್ ಹೌಸ್‌’ಗೆ ಬೆಂಕಿ, 'ಕೈ' ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ

ಅರಣ್ಯಾಧಿಕಾರಿಗಳಿಂದ ಹುಲಿ ಶೋಧ ಕಾರ್ಯಾಚರಣೆ ಸ್ಥಗಿತ: ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಹೆಚ್ಚಿದ ಆತಂಕ!

ಶಬರಿಮಲೆ ಚಿನ್ನ ಕಳ್ಳತನ ವಿವಾದ: ಸೋನಿಯಾ ವಿರುದ್ಧ ಎಡಪಂಥೀಯರ ನಿಲುವಿಗೆ ರಾಹುಲ್ ಗಾಂಧಿ ಅಸಮಾಧಾನ

ಪಾಕಿಸ್ತಾನ: ಮದುವೆ ಮನೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; ಮಂದಿ ಸಾವು

SCROLL FOR NEXT