ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಕಟ್ಟಡದಿಂದ ಹಾರಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಪ್ರೇಮಿಗಳ ದಿನದಂದೇ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ...

ಬೆಳಗಾವಿ: ಪ್ರೇಮಿಗಳ ದಿನದಂದೇ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಪಾಲಿಟೆಕ್ನಿಕ್‌ ಕಾಲೇಜಿನ ಡಿಪ್ಲೋಮಾ ಸಿವಿಲ್‌ ಇಂಜಿನಿಯರಿಂಗ್‌ 4ನೇ ಸೆಮಿಸ್ಟರ್‌ನ ವಿದ್ಯಾರ್ಥಿ ಶಿವಪ್ರಸಾದ್‌ ಪವಾರ್ (18) ಇಂದು ಬೆಳಗ್ಗೆ ಕಾಲೇಜಿನ 2ನೆ ಮಹಡಿಯಿಂದ ಹಾರಿ ಸಾವಿಗೆ ಶರಣಾಗಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಪ್ಪಾಣಿ ತಾಲೂಕಿನ ನಿವಾಸಿಯಾದ ವಿದ್ಯಾರ್ಥಿ ಶಿವಪ್ರಸಾದ್‌ ಅವರು ಬೆಳಗಾವಿ ನಗರದ ಹೊರವಲಯದಲ್ಲಿರುವ ಸರ್ಕಾರಿ ಹಾಸ್ಟೆಲ್‌ನಲ್ಲಿ ನೆಲೆಸಿದ್ದರು. ಬಡ ಕುಟುಂಬದಿಂದ ಬಂದಿದ್ದ ಅವರು ತಮ್ಮ ಬಿಡುವಿನ ವೇಳೆಯಲ್ಲಿ ಸ್ಥಳೀಯ ಹೋಟೆಲ್‌ ಒಂದರಲ್ಲಿ ಕೆಲಸ ಮಾಡಿ ತನ್ನ ಶಿಕ್ಷಣಕ್ಕೆ ಬೇಕಾದ ಹಣವನ್ನು ಸಂಪಾದಿಸುತ್ತಿದ್ದರು. ಆದರೆ ಆತ್ಮಹತ್ಯೆಗೆ ಏನು ಕಾರಣ ಎಂದು ತಿಳಿದು ಬಂದಿಲ್ಲ.
ಶಿವಪ್ರಸಾದ್ ಎಂದಿನಂತೆ ಮೊದಲ ಪಿರಿಯಡ್‌ಗೆ ಹಾಜರಾಗಿದ್ದರು. ಬಳಿಕ ಅವರು 2ನೆ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಹಾರಿದ್ದಾರೆ. ವಿಷಯ ತಿಳಿದ ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!