ಸಾಂದರ್ಭಿಕ ಚಿತ್ರ 
ರಾಜ್ಯ

ವಂಚನೆಗೆ ವಿಧಾನಸೌಧವೇ ಅಡ್ಡಾ: ಗೋಡಂಬಿ ಉದ್ಯಮಿಗೆ ಪಂಗನಾಮ, ಮಾಜಿ ಶಾಸಕನ ಮಗ, ಮೊಮ್ಮಗ ಬಂಧನ

ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಶಾಸಕನ ಮಗ ಮತ್ತು ಮೊಮ್ಮಗ ಸೇರಿ ಹಲವರನ್ನು ಬಂಧಿಸಿದ್ದಾರೆ....

ಬೆಂಗಳೂರು: ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಶಾಸಕನ ಮಗ ಮತ್ತು ಮೊಮ್ಮಗ ಸೇರಿ ಹಲವರನ್ನು ಬಂಧಿಸಿದ್ದಾರೆ.
100 ಕೋಟಿ ರು ಸಾಲ ನೀಡುವುದಾಗಿ ಭರವಸೆ ನೀಡಿ ಉದ್ಯಮಿಯಿಂದ 1.12 ಕೋಟಿ ಹಣ ಪಡೆದು ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಪೊಲೀಸರು, ಶೇಷಾದ್ರಿಪುರಂ ನಿವಾಸಿ ಪಿ. ಕಾರ್ತಿಕೇಯನ್ ಹಾಗೂ ಆತನ ಪುತ್ರ ಸ್ವರೂಪ್  ಕಾರ್ತಿಕೇಯನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ತಿಕೇಯನ್ ತಂದೆ ಪಳನಿಯಪ್ಪನ್ 1950 ರಲ್ಲಿ ಶಿವಾಜಿ ನಗರ ಶಾಸಕರಾಗಿದ್ದರು, ದಾರುದಾರ ರಮೇಶ್  ಗೋಡಂಬಿ ಉದ್ಯಮ ಆರಂಭಿಸಲು 100 ಕೋಟಿ ರು ಸಾಲ ಬಯಸಿದ್ದರು. ಅವರು ಕಾರ್ತಿಕೇಯನ್  ಭೇಟಿ ಮಾಡಿದರು, ಆರೋಪಿ ಕಾರ್ತಿಕೇಯನ್ ತನಗೆ ಸರ್ಕಾರಿ ಅಧಿಕಾರಿಗಳ ಜೊತೆ ಸಂಪರ್ಕವಿದ್ದು, ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ ಭರವಸೆ ನೀಡಿದ್ದ.
ಈ ಹಿನ್ನೆಲೆಯಲ್ಲಿ ರಮೇಶ್, 1.12 ಕೋಟಿ ರು ಹಣವನ್ನು ಸ್ವರೂಪ್ ಗೆ ನೀಡಿದ್ದರು, ಆದರೆ ಹಣ ಪಡೆದ ನಂತರ ಆರೋಪಿಗಳು ಸಂಪರ್ಕಕ್ಕೆ ಸಿಗಲಿಲ್ಲ, ರಮೇಶ್ ದೂರಿನ ಅನ್ವಯ ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರಿಂದ 40 ಲಕ್ಷ ರು. ಹಣ ಜಪ್ತಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT