ಎಚ್.ಡಿ. ಕುಮಾರಸ್ವಾಮಿ 
ರಾಜ್ಯ

ಜಂತಕಲ್‍ ಗಣಿ ಹಗರಣ: ಸಿಎಂ ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಕೋರಿ ಪಿಐಎಲ್

ಕೆಲ ವರ್ಷಗಳಿಂದ ತಣ್ಣಗಾಗಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಜಂತಕಲ್ ಮೈನಿಂಗ್ ಹಗರಣ ಈಗ ಮತ್ತೆ ಜೀವ ಪಡೆದುಕೊಂಡಿದೆ.

ಬೆಂಗಳೂರು: ಕೆಲ ವರ್ಷಗಳಿಂದ ತಣ್ಣಗಾಗಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಜಂತಕಲ್ ಮೈನಿಂಗ್ ಹಗರಣ ಈಗ ಮತ್ತೆ ಜೀವ ಪಡೆದುಕೊಂಡಿದೆ.

ಕುಮಾರಸ್ವಾಮಿ ವಿರುದ್ಧದ ಪ್ರಕರಣದ ವಿಚಾರಣೆ ತೀವ್ರಗೊಳಿಸುವಂತೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಜಂತಕಲ್‍ ಎಂಟರ್ ಪ್ರೈಸಸ್ ಗಣಿ ಪರವಾನಗಿ ನವೀಕರಣದಲ್ಲಿ ಅವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಅದರ ಆಧಾರದ ಮೇಲೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಸಂಸ್ಥೆಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್‍ ಸಲ್ಲಿಕೆಯಾಗಿದೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರ ಆಗಸ್ಟ್ 10ರಂದು ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಬ್ಬಾಳ ಗ್ರಾಮದ ಸಾಮಾಜಿಕ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಹರೀಶ ಹಳ್ಳಿ ಎಂಬುವರು ಈ ಅರ್ಜಿ ಸಲ್ಲಿಸಿದ್ದು,  ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕಾನೂನು ಇಲಾಖೆ ಕಾರ್ಯದರ್ಶಿ ಹಾಗೂ ಲೋಕಾಯುಕ್ತ ರಿಜಿಸ್ಟ್ರಾರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಅರ್ಜಿಯಲ್ಲೇನಿದೆ?
2018ರ ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಲು ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸಿದ ಹಾಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ತಮ್ಮ ವಿರುದ್ಧ ಜಂತಕಲ್ ಮೈನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯ ಪ್ರಕರಣ ಬಾಕಿ ಇದೆ ಎಂದು ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರೂ, ಲೋಕಾಯುಕ್ತ ರಿಜಿಸ್ಟಾರ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕೆಳ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಇಲ್ಲಿಯವರೆಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿಲ್ಲ.

ಆರೋಪಿ ಸ್ಥಾನದಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಹಾಲಿ ಮುಖ್ಯಮಂತ್ರಿ ಹಾಗೂ ಪ್ರಭಾವಿ ರಾಜಕಾರಣಿಯಾಗಿದ್ದಾರೆ. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸದಂತೆ ಲೋಕಾಯುಕ್ತ ರಿಜಿಸ್ಟ್ರಾರ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಆದ್ದರಿಂದ ತಕ್ಷಣ ಕುಮಾರಸ್ವಾಮಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಬೇಕು ಹಾಗೂ ಕಾನೂನುಬದ್ಧ ಕ್ರಮ ಜರುಗಿಸುವಂತೆ ಲೋಕಾಯುಕ್ತ ಸಂಸ್ಥೆಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ. ಈ ಸಂಬಂಧ ತಾವು ಕಳೆದ ಫೆ.7ರಂದು ರಾಷ್ಟ್ರಪತಿ, ಅಟಾರ್ನಿ ಜನರಲ್ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಏನಿದು ಪ್ರಕರಣ?
ಈ ಹಿಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿಯವರು ವಿನೋದ್ ಗೋಯಲ್ ಮಾಲಿಕತ್ವದ ಜಂತಕಲ್ ಎಂಟರ್ ಪ್ರೈಸಸ್ ಗೆ ಚಿತ್ರದುರ್ಗ ಜಿಲ್ಲೆಯ ಮೀಸಲು ಅರಣ್ಯದಲ್ಲಿ ಗಣಿಗಾರಿಕೆ ನಡೆಸಲು ಗಣಿ ಪರವಾನಿಗೆ ನವೀಕರಣಕ್ಕೆ ಅನುಮತಿ ನೀಡಿದ್ದರು. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಿನ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ವರದಿ ನೀಡಿದ್ದರು. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ 2015ರಲ್ಲಿ ಲೋಕಾಯುಕ್ತದಲ್ಲಿ ಹಾಗೂ 2017ರಲ್ಲಿ ಎಸ್ಐಟಿಯಲ್ಲಿ ದೂರು ದಾಖಲಾಗಿತ್ತು.
ಇದರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಇದೇ ಪ್ರಕರಣದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಾದ ಮಹೇಂದ್ರ ಜೈನ್ ಹಾಗೂ ಗಂಗಾರಾಂ ಬಡೇರಿಯಾ ವಿರುದ್ಧವೂ ಆರೋಪ ಕೇಳಿ ಬಂದಿತ್ತು. 2017ರಲ್ಲಿ ಗಂಗಾರಾಂ ಬಡೇರಿಯಾ ಅವರನ್ನು ಇದೇ ಪ್ರಕರಣದಲ್ಲಿ ಎಸ್ಐಟಿ ಬಂಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT