ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಲೇಡಿಸ್ ಹಾಸ್ಟೆಲ್ ಬಳಿ ಹಸ್ತ ಮೈಥುನ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಬಂಧನ

ಬನ್ನೇರುಘಟ್ಟ ರಸ್ತೆ ಖಾಸಗಿ ಕಾಲೇಜಿನ ಲೇಡಿಸ್‌ ಹಾಸ್ಟೆಲ್‌ ಬಳಿಯ ಕಟ್ಟಡದ ಮೇಲೆ ನಿಂತು ಅರೆನಗ್ನನಾಗಿ ನಿಂತು ಹಸ್ತ ಮೈಥುನ ಮಾಡಿ ವಿಕೃತಿ ಮೆರೆದ ...

ಬೆಂಗಳೂರು: ಬನ್ನೇರುಘಟ್ಟ ರಸ್ತೆ ಖಾಸಗಿ ಕಾಲೇಜಿನ ಲೇಡಿಸ್‌ ಹಾಸ್ಟೆಲ್‌ ಬಳಿಯ ಕಟ್ಟಡದ ಮೇಲೆ ನಿಂತು ಅರೆನಗ್ನನಾಗಿ ನಿಂತು ಹಸ್ತ ಮೈಥುನ ಮಾಡಿ ವಿಕೃತಿ ಮೆರೆದ ವಿಕೃತಕಾಮಿಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. 
ಎಂಎಲ್ ಎ ಲೇಔಟ್ ನಿವಾಸಿ ಯಲ್ಲಪ್ಪ (34) ಬಂಧಿತ ಆರೋಪಿ. ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿರುವ  ಎನ್ ಎಂಐಎಎಸ್ ಕಾಲೇಜಿನ ಲೇಡಿಸ್‌ ಹಾಸ್ಟೆಲ್‌ನಲ್ಲಿ ನೂರಾರು ವಿದ್ಯಾರ್ಥಿನಿಯರು ವಾಸಿಸುತ್ತಿದ್ದಾರೆ. ಹಾಸ್ಟೆಲ್‌ ಹಿಂಭಾಗದ ಕಟ್ಟಡದ ಮೇಲೆ ಕಳೆದ ಹಲವು ದಿನಗಳಿಂದ ರಾತ್ರಿ ವೇಳೆ ಯಲ್ಲಪ್ಪ ಅರೆನಗ್ನನಾಗಿ ನಿಂತುಕೊಂಡು ಹಸ್ತ ಮೈಥುನ ಮಾಡಿಕೊಳ್ಳುತ್ತಿದ್ದ.
. ಫೆ.12ರಂದು ರಾತ್ರಿ 11 ಗಂಟೆ ಸುಮಾರಿಗೆ ಹಾಸ್ಟೆಲ್‌ ಹಿಂಭಾಗದ ಕಟ್ಟಡವೇರಿದ ಯಲ್ಲಪ್ಪ, ವಿಕೃತವಾಗಿ ವರ್ತಿಸಿದ್ದಾನೆ. ಹೀಗಾಗಿ, ವಿದ್ಯಾರ್ಥಿನಿಯರು ಹಾಸ್ಟೆಲ್‌ ವಾರ್ಡನ್‌ ಮತ್ತು ಸೆಕ್ಯುರಿಟಿ ಗಾರ್ಡ್‌ಗೆ ಮಾಹಿತಿ ನೀಡಿದ್ದರು. ಗಾರ್ಡ್‌ನನ್ನು ನೋಡಿದ ಕೂಡಲೇ ಆರೋಪಿ, ಕಟ್ಟಡದಿಂದ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ, ಬೆನ್ನಟ್ಟಿಕೊಂಡು ಹೋದ ವಿದ್ಯಾರ್ಥಿನಿಯರು ಹಾಗೂ ಸೆಕ್ಯುರಿಟಿ ಗಾರ್ಡ್‌, ಆತನಿಗೆ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ತೆರಳಿದ ಹುಳಿಮಾವು ಪೊಲೀಸರು  ಆತನನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ. 
ಹಾಸ್ಟೆಲ್‌ ವಾರ್ಡನ್‌ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಯಲ್ಲಪ್ಪನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಕುಡಿದ ಮತ್ತಿನಲ್ಲಿ ಯಲ್ಲಪ್ಪ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT