ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಖಂಡಿಸಿ ಇದೇ ತಿಂಗಳ 19ರಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಕರೆ ನೀಡಿದ್ದ ಬಂದ್ ನ್ನು ಮುಂದೂಡಿದ್ದಾರೆ. ಕರ್ನಾಟಕ ಬಂದ್ ಬದಲಾಗಿ ಕರಾಳ ದಿನ ಆಚರಣೆ ಮಾಡಲು ನಿರ್ಧರಿಸಿದ್ದಾರೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದವು. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ನೀಡಿದ್ದವು. ಆದರೆ, ಕುಂಭಮೇಳ, ಬೆಂಗಳೂರಿನ ಏರ್ಶೋ, ಧರ್ಮಸ್ಥಳ ಮಹಾಮಸ್ತಕಾಭಿಷೇಕ ನಡೆಯುತ್ತಿದೆ. ಹಾಗಾಗಿ, ಬಂದ್ ದಿನಾಂಕವನ್ನು ಅವರು ಮುಂದೂಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ 19ರಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನ ಆಚರಣೆ ಮಾಡಲು ನಿರ್ಧರಿಸಿದ್ದಾರೆ.