ಶಿವಮೊಗ್ಗ: ಹುತಾತ್ಮ ಯೋಧರ ಸ್ಮರಣಾರ್ಥ 200ಕ್ಕೂ ಹೆಚ್ಚು ಮಂದಿಯಿಂದ ರಕ್ತದಾನ 
ರಾಜ್ಯ

ಶಿವಮೊಗ್ಗ: ಹುತಾತ್ಮ ಯೋಧರ ಸ್ಮರಣಾರ್ಥ 200ಕ್ಕೂ ಹೆಚ್ಚು ಮಂದಿಯಿಂದ ರಕ್ತದಾನ

ಪುಲ್ವಾಮಾ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಗೌರವಾರ್ಥಶಿವಮೊಗ್ಗದಲ್ಲಿ ಭಾನುವಾರ ರಕ್ತದಾನ ಶಿಬಿರ ಏರ್ಪಡಿಸಿದ್ದರು. ಶಿಬಿರದಲ್ಲಿ 200 ಕ್ಕಿಂತ ಹೆಚ್ಚು ಜನರು ರಕ್ತದಾನ ಮಾಡಿದರು.

ಶಿವಮೊಗ್ಗ: ಪುಲ್ವಾಮಾ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಗೌರವಾರ್ಥಶಿವಮೊಗ್ಗದಲ್ಲಿ ಭಾನುವಾರ ರಕ್ತದಾನ ಶಿಬಿರ ಏರ್ಪಡಿಸಿದ್ದರು. ಶಿಬಿರದಲ್ಲಿ  200 ಕ್ಕಿಂತ ಹೆಚ್ಚು ಜನರು ರಕ್ತದಾನ ಮಾಡಿದರು.
ಶಿವಮೊಗ್ಗ ನಗರದ ಗೋಪಾಲ ಗೌಡ ಪ್ರದೇಶದ ಸ್ಥಳೀಯರು ರಕ್ತದಾನ ಶಿಬಿರವನ್ನು ಆಯೋಜಿಸಿದರು ಮತ್ತು ಶಿವಮೊಗ್ಗ ಉಪ ಕಮೀಷನರ್ ಕೆ.ಎ. ದಯಾನಂದ  ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
"ಇದೊಂದು ಉತ್ತಮ ಕಾರ್ಯಕ್ರಮ.ನಮಗಾಗಿ ಧೈರ್ಯದಿಂಡ ದೇಶ ಕಾಯುವ ಯೋಧರ ಪ್ರಾಣತ್ಯಾಗವನ್ನು ನಾವು ಸ್ಮರಿಸಬೇಕು.ನಾವು ಈ ರಕ್ತದಾನ ಶಿಬಿರ ಮಾಡುವ ಮೂಲಕ ಅವರಿಗೆ ಗೌರವ ಸೂಚಿಸುತೇವೆ.ನಾನು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಖುಷಿಯಿಂದಿದ್ದೇನೆ; ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು" ಎಂದು ದಯಾನಂದ ಹೇಳಿದರು.
ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದಲ್ಲಿ ನಡೆಸಿದ್ದ ಉಗ್ರದಾಳಿಯಲ್ಲಿ ನಲವತ್ತಕ್ಕೆ ಹೆಚ್ಚು ಸಿಆರ್ ಪಿಎಫ್ ಸಿಬ್ಬಂದಿ ಹತರಾಗಿದ್ದರು. ಈ ದಾಳಿಯನ್ನು ಖಂಡಿಸಿದ ಜಾಗತಿಕ ವಲಯದ 48  ರಾಷ್ಟ್ರಗಳು ಭಾರತಕ್ಕೆ ಬೆಂಬಲ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್

ಮೆಟ್ರೋ ರೈಲಿನಲ್ಲೇ ಮಹಿಳೆಯ ಪುಲ್‌ಅಪ್ಸ್‌ ಕಸರತ್ತು; ಹೊಸ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!